Wednesday, January 22, 2025

ಜಮೀರ್ ಅಹ್ಮದ್ ವಿರುದ್ಧ ಗುಡುಗಿದ ಸಚಿವ ಸಿ.ಟಿ ರವಿ

ಚಿಕ್ಕಮಗಳೂರು : ಬಹುಶಃ ನನಗೆ ಅನ್ನಿಸೋದು ಬೆಂಗಳೂರು ಗಲಭೆಯ ಪ್ರೊಡ್ಯೂಸರ್ ಹಾಗೂ ಡೈರಕ್ಟರ್ ಜಮೀರ್ ಅಹಮದ್ ಅವರೇ ಇರಬೇಕು. ಅವರೇ ಪ್ರೊಡ್ಯೂಸರ್-ಡೈರಕ್ಟರ್ ಆಗಿದ್ರೆ ಆಕ್ಟರ್​ ಯಾರೆಂದು ಗೊತ್ತೇ ಗೊತ್ತಿರುತ್ತೆ ಅದನ್ನ ಸ್ಪಷ್ಟಪಡಿಸಲಿ ಎಂದು ಪ್ರವಾಸೋಧ್ಯಮ ಸಚಿವ ಸಿ.ಟಿ ರವಿ ಜಮೀರ್ ಅಹಮದ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಜಮೀರ್ ಅಹಮದ್ ಗೋಲಿಬಾರ್‍ನಲ್ಲಿ ಮೃತರಾದವರ ಮನೆಗೆ ಹೋಗಿ ಚೆಕ್ ನೀಡಿ ಬಂದಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿ.ಟಿ ರವಿ, ಬಹುಶಃ ನನಗೆ ಅನ್ನಿಸೋದು ಬೆಂಗಳೂರು ಗಲಭೆಯ ಪ್ರೊಡ್ಯೂಸರ್ ಹಾಗೂ ಡೈರಕ್ಟರ್ ಜಮೀರ್ ಅಹಮದ್ ಅವರೇ ಇರಬೇಕು ಎಂದರು. ಈಗ ಜಮೀರ್ ಅಹಮದ್ ಎಲ್ಲಾ ಜಿಪಿಎ ತೆಗೆದುಕೊಂಡಿರೋದ್ರಿಂದ ಏನ್ ನಷ್ಟ ಆಗಿದೆ ಅದನ್ನ ಜಮೀರ್ ಅಹಮದ್‍ರಿಂದ ವಸೂಲಿ ಕ್ರಮ ತೆಗೆದುಕೊಳ್ಳೋಣ ಎಂದು ಕಿಡಿಕಾರಿದರು. ನೀವು ಸಹಾಯ ಮಾಡುವುದು ಮಾನವೀಯ ಧರ್ಮ ಇರಬಹುದು. ಯಾವ ಸಂದರ್ಭದಲ್ಲಿ ಸಹಾಯ ಮಾಡ್ತಿದ್ದೀರಾ, ಯಾರಿಗೆ ಸಹಾಯ ಮಾಡ್ತಿದ್ದೀರಾ ಎಂಬುದು ಮುಖ್ಯವಾಗುತ್ತೆ. ಅದು ಕೊಡುವ ಮೆಸೇಜ್ ಮಾನವೀಯ ಮೆಸೇಜ್ ಕೊಡುವುದಿಲ್ಲ. ಯಾರು ಏನೇ ಮಾಡಿದರು, ನಾನು ನಿಮ್ಮ ಜೊತೆ ಇದ್ದೀನಿ ಎಂಬ ಮೆಸೇಜ್  ಕೊಡುತ್ತೆ. ಇದರ ಬಗ್ಗೆ ಅವರ ಪಕ್ಷ ಯೋಚಿಸಬೇಕು ಎಂದರು. ಕೊರೋನ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದವರು ಜೈಲಿನಿಂದ ಬಂದ್ರೆ ಅವರಿಗೆ ಹಾರ ಹಾಕಿ ಸನ್ಮಾನ ಮಾಡ್ತಾರೆ. ಅವರಿಗೆ ಪ್ರಚೋದಿಸುವ ಕೆಲಸವನ್ನ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಮಾಡ್ತಿದ್ದಾರೆ. ಗೋಲಿಬಾರ್‍ನಲ್ಲಿ ಸತ್ತವರು ಆಮಾಯಕರಲ್ಲ. ಅಮಾಯಕರಾಗಿದ್ದರೆ ಮನೆಯಲ್ಲಿ ಮಲಗಿರೋರು. ಅವರು ಅಮಾಯಕರು ಅಂತಾರೆ. 300ಕ್ಕೂ ಹೆಚ್ಚು ವಾಹನ ಸುಟ್ಟಿದ್ದಾರಲ್ಲಾ, ಆ ವಾಹನ ಸುಟ್ಟವರು ಯಾರು ಹೇಳಲಿ ಹಾಗಾದ್ರೆ. ಇವ್ರು ಅಮಾಯಕರಾದರೆ ಆ ಕಿರಾತಕರು ಯಾರು. ಜಮೀರ್ ಅಹಮದ್ ಖಾನ್‍ಗೆ ಚೆನ್ನಾಗಿ ಗೊತ್ತಿರುತ್ತೆ ಎಂದಿದ್ದಾರೆ. ನಷ್ಟ ವಸೂಲಿ ಕೆಲಸ ಆಗಲೇಬೇಕು. ಈಗಿನ ಕಾಂಗ್ರೆಸ್ ಒಳ ರಾಜಕಾರಣ ನೋಡಿದರೆ ಅವರು ಪ್ರೊಡ್ಯೂಸರ್-ಡೈರಕ್ಟರ್ ಆಗಿದ್ದಾರೆ. ಲೀಡ್ ಮಾಡಿರೋದು ಎಸ್.ಡಿ.ಪಿ.ಐ ಆ್ಯಕ್ಟ್ ಮಾಡಿ 300ಕ್ಕೂ ಹೆಚ್ಚು ವಾಹನ ಸುಟ್ಟಿರೋರು ಈ ಜನ. ಅವರಿಗೆ ಗೊತ್ತಿರುತ್ತೆ ಸ್ಪಷ್ಟಪಡಿಸಲಿ ಎಂದಿದ್ದಾರೆ. ನಾನು ಆರಂಭದಿಂದ ಹೇಳಿದ್ದೇನೆ, ಕಾಂಗ್ರೆಸ್ ತೊಟ್ಟಿಲನ್ನ ತೂಗಿ ಮಗುವನ್ನ ಚಿವುಟೋ ಕೆಲಸ ಮಾಡ್ತಿದೆ, ಜಮೀರ್ ಅಹಮದ್ ಮಾಡ್ತಿರೋದು ಅದನ್ನೇ ಎಂದು ಕಾಂಗ್ರೆಸ್ ಹಾಗೂ ಜಮೀರ್ ಅಹಮದ್ ವಿರುದ್ಧ ಕಿಡಿಕಾರಿದ್ದಾರೆ.

RELATED ARTICLES

Related Articles

TRENDING ARTICLES