Monday, December 23, 2024

12 ಪ್ರಕರಣಗಳಲ್ಲಿ ಬೇಕಿದ್ದ ಆರೋಪಿಗೆ ಗುಂಡೇಟು..!

ಬೆಂಗಳೂರು ಗ್ರಾಮಾಂತರ : ಆರೋಪಿಯನ್ನು ಬಂಧಿಸಲು ಹೋದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್‌ಗೆ  ಚಾಕುವಿನಿಂದ ಇರಿದ ಹಿನ್ನೆಲೆ ಸಬ್ ಇನ್ಸ್ಪೆಕ್ಟರ್ ನಂದೀಶ್ ಆರೋಪಿ ಕಾಲಿಗೆ ಗುಂಡು ಹಾರಿಸಿದ ಘಟನೆ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಬಳಿಯ ಕೋರಮಂಗಲ ಸಮೀಪ ನಡೆದಿದೆ. 

ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ ನಾರಾಯಣಸ್ವಾಮಿ ಚಾಕು ಇರಿತಕ್ಕೊಳಗಾದ ಸಿಬ್ಬಂದಿ. ಆರೋಪಿಯನ್ನು ಮತ್ತು ಹೆಡ್ ಕಾನ್ಸ್‌ಟೇಬಲ್‌​ನನ್ನು ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ ಅಜಯ್ ರಾಮನಗರ ನಿವಾಸಿ, ಈತನ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 12 ಪ್ರಕರಣ ದಾಖಲಾಗಿದೆ.

ಘಟನೆ  ವೇಳೆ ಸಬ್ ಇನ್ಸ್ಪೆಕ್ಟರ್ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ನಂತರ ಆರೋಪಿ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ್ದಾರೆ.ಇನ್ನೂ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಎಸ್ಪಿ ರವಿ ಡಿ ಚನ್ನಣ್ಣನ್ನವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES