Wednesday, January 22, 2025

ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ ಭೂ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

ಕೋಲಾರ: ನಗರದ ತಹಶೀಲ್ದಾರ್ ಕಚೇರಿ ಎದುರು ಇವತ್ತು ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನ ಕೂಗಿದ್ರು. ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತ, ಜನ ವಿರೋಧಿ ಕಾಯ್ದೆಗಳನ್ನ ವಾಪಸ್ಸು ಪಡೆಯುವಂತೆ ಒತ್ತಾಯಿಸಿದ್ರು.

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ(ಅಗ್ರಿಕಲ್ಚರ್​ ಪ್ರೊಡ್ಯೂಸ್ ಮಾರ್ಕೆಟ್​ ಕಮಿಟೀ)​ ಕಾಯ್ದೆ, ಕೈಗಾರಿಕಾ ವಾಣಿಜ್ಯ ಕಾಯ್ದೆ, ಗುತ್ತಿಗೆ ಕಾರ್ಮಿಕರ ನಿಯಂತ್ರಣ ಕಾಯ್ದೆಗಳ ಜಾರಿಯಿಂದ ರೈತರಿಗೆ ಹಾಗೂ ಕಾರ್ಮಿಕರಿಗೆ ಅನ್ಯಾಯವಾಗಲಿದೆ. ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾಯ್ದೆಗಳನ್ನ ವಾಪಸ್ಸು ಪಡೆಯಬೇಕು, ಇಲ್ಲದೆ ಇದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ರು. ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ರು.
ಪ್ರತಿಭಟನೆಯಲ್ಲಿ ಜೆಡಿಎಸ್ ಶಾಸಕ ಕೆ.ಶ್ರೀನಿವಾಸಗೌಡ, ಎಂಎಲ್ಸಿಗಳಾದ ಗೋವಿಂದರಾಜು, ಚೌಡರೆಡ್ಡಿ, ಮುಖಂಡ ಸಮೃದ್ದಿ ಮಂಜುನಾಥ್ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

-ಆರ್.ಶ್ರೀನಿವಾಸಮೂರ್ತಿ

RELATED ARTICLES

Related Articles

TRENDING ARTICLES