Wednesday, January 22, 2025

ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರಿಗೆ ಝೆಡ್ ಪ್ಲಸ್ ಭದ್ರತೆ ನೀಡಿ

ದೊಡ್ಡಬಳ್ಳಾಪುರ : ಕೆ.ಜೆ ಹಳ್ಳಿ ಮತ್ತು ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಸುಟ್ಟು ಆಸ್ತಿ ಪಾಸ್ತಿ ನಷ್ಟ ಉಂಟು ಮಾಡಿದ್ದಾರೆ. ಶಾಸಕ ಶ್ರೀನಿವಾಸಮೂರ್ತಿ ಅವರನ್ನು ಕೊಲೆ ಮಾಡಲು ಪೂರ್ವ ನಿಯೋಜಿತವಾಗಿ ಸಂಚು ರೂಪಿಸಿದ್ದಾರೆ. ಆದ್ದರಿಂದ ಶಾಸಕರಿಗೆ ಝೆಡ್ ಪ್ಲಸ್ ಮಾದರಿಯಲ್ಲಿ ಭದ್ರತೆಯನ್ನ ಸರ್ಕಾರ ನೀಡಬೇಕು ಎಂದು ಭೋವಿ ಜನಾಂಗ ಒತ್ತಾಯ ಮಾಡುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಗಲಭೆ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸಿದ ದೊಡ್ಡಬಳ್ಳಾಪುರ ತಾಲೂಕು ಭೋವಿ ಜನಾಂಗ ಈ ರೀತಿ ಸರ್ಕಾರಕ್ಕೆ ಒತ್ತಾಯ ಮಾಡಿದೆ. ಜೊತೆಗೆ ಗಲಭೆಯಲ್ಲಿ ನಷ್ಟವಾದ ಆಸ್ತಿ ಪಾಸ್ತಿ ಮೊತ್ತವನ್ನು ಗಲಭೆಕೋರರಿಂದ ಕಟ್ಟಿಸಿಕೊಳ್ಳಬೇಕು. ಕರ್ನಾಟಕದಲ್ಲಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆದ್ದ ದಲಿತ ಶಾಸಕರಿಗೆ ಈ ರೀತಿ ಆದ್ರೆ ಜನ ಸಾಮಾನ್ಯರ ಗತಿ ಏನು? ದಲಿತ ಶಾಸಕರ ರಾಜಕೀಯ ಭವಿಷ್ಯವನ್ನು ಹಾಳು ಮಾಡುಲು ಉದ್ದೇಶಪೂರ್ವಕವಾಗಿ ಈ ಕೃತ್ಯ ಮಾಡಲಾಗಿದೆ. ಘಟನೆಗೆ ಕಾರಣವಾದ ಎಸ್ ಡಿ ಪಿ ಐ, ಪಿ ಎಫ್ ಐ ಇತರೆ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಭೋವಿ ಜನಾಂಗ ಸಂಘದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು. ಪೋಲಿಸ್ ಠಾಣೆಗೆ ಬೆಂಕಿ ಇಡುವ ಮಟ್ಟಕ್ಕೆ ಹೋಗಿದ್ದಾರೆ ಅಂದ್ರೆ ಇನ್ನೂ ಜನ ಸಾಮಾನ್ಯರ ಕಥೆ ಏನಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಿದರು.

RELATED ARTICLES

Related Articles

TRENDING ARTICLES