ಹುಬ್ಬಳ್ಳಿ: ವಕೀಲ ಹಾಗೂ ಹೋರಾಟಗಾರರಾದ ಪ್ರಶಾಂತ ಭೂಷಣ ಅವರ ಎರಡು ಟ್ವಿಟ್ ಬಳಸಿಕೊಂಡು ನ್ಯಾಯಾಂಗ ನಿಂದನೆ ಕೇಸ್ ಅಡಿಯಲ್ಲಿ ತಪ್ಪಿತಸ್ಥರೆಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿರುವುದು ಖಂಡನೀಯವಾಗಿದೆ ಕೂಡಲೇ ಮರುಪರಿಶೀಲನೆ ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಆಗ್ರಹಿಸಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಎರಡು ಟ್ವೀಟ್ ಗಳಿಗಾಗಿ ನ್ಯಾಯವಾದಿ ಪ್ರಶಾಂತ ಭೂಷಣ ಅವರನ್ನು ನ್ಯಾಯಾಲಯ ನಿಂದನೆ ಆರೋಪದಲ್ಲಿ ದೋಷಿ ಎಂದು ಸರ್ವೋಚ್ಚ ನ್ಯಾಯಾಲಯವು ಘೋಷಣೆ ಮಾಡಿರುವುದು ದುಃಖಕರ ಸಂಗತಿಯಾಗಿದೆ. ಸರ್ವೋಚ್ಚ ನ್ಯಾಯಾಲಯದ ತೀರ್ಪು ಅಭಿವ್ಯಕ್ತ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದರು.
ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಒಗ್ಗಟ್ಟಾಗಿ ಪ್ರಶಾಂತ ಭೂಷಣ ಅವರನ್ನು ಬೆಂಬಲಿಸಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು,ನಾಳೆ ಧಾರವಾಡದಲ್ಲಿ ಸುಪ್ರೀಂ ಕೋರ್ಟ್ ಮರುಪರಿಶೀಲನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಅವರು ಹೇಳಿದರು.