ತುಮಕೂರು : ರೈತರು, ಕಾರ್ಮಿಕರು ಹಾಗೂ ಜನಸಾಮಾನ್ಯರ ವಿರೋಧಕ್ಕೆ ಕಾರಣವಾಗಿರುವ ತಿದ್ದುಪಡಿ ಕಾಯ್ದೆಯನ್ನು ಸರ್ಕಾರ ಈ ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿ ನಾಳೆ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪ್ರತಿಭಟನೆ ನಡೆಸಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ತುಮಕೂರು ಗ್ರಾಮಾಂತರ ಶಾಸಕ ಡಿ ಸಿ ಗೌರಿಶಂಕರ್, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಾಳೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಲಿದ್ದು ಭೂಮಿ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿಯನ್ನು ಜಾರಿ ಮಾಡುವ ನಿರ್ಧಾರವನ್ನು ಸರ್ಕಾರ ಕೈ ಬಿಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಹಾಗೂ ಕೊರೋನಾ ಸಂಕಷ್ಟ ರಾಜ್ಯದಲ್ಲಿರುವುದರಿಂದ 200 ಜನ ಮಾತ್ರ ಪ್ರತಿಭಟನೆಯಲ್ಲಿ ಪಾಲ್ಗೋಳ್ಳಲಿದ್ದು ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸಲಾಗುವುದು ಎಂದರು.
ಹೇಮಂತ್ ಕುಮಾರ್ ಜೆ.ಎಸ್. ಪವರ್ ಟಿವಿ, ತುಮಕೂರು.