Monday, December 23, 2024

ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಕೊರೋನಾ ದೃಢ : ಕೆಜಿಎಫ್ ಪೊಲೀಸ್ ಮುಖ್ಯಪೇದೆ ಸಾವು

ಕೋಲಾರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದರೆ. ಹಾಗೂ ಕೊವಿಡ್​ನಿಂದ ಪೊಲೀಸ್ ಮುಖ್ಯಪೇದೆ ಸಾವಿಗೀಡಾಗಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಕೊವಿಡ್​ನಿಂದ ಗುಣಮುಖರಾದವರ ಸಂಖ್ಯೆಯು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದ್ರೂ ಜಿಲ್ಲೆಯಲ್ಲಿ ಕೊರೋನಾ ತನ್ನ ಆರ್ಭಟವನ್ನ ಮುಂದುವರೆಸಿದೆ. ಸೋಂಕಿತರ ಸಂರ್ಪಕದಿಂದ ಸೋಂಕು ಹರಡುವಿಕೆ ಕಡಿಮೆಯಾದ್ರೂ, ವಿಷಮ ಶೀತ ಜ್ವರಕ್ಕೆ ತುತ್ತಾದವರಿಂದ ಸೋಂಕಿತರು ಜಾಸ್ತಿಯಾಗ್ತಾಯಿದ್ದಾರೆ.

 ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಗೆ ಕೊರೋನ ಖಚಿತವಾಗಿದ್ದು, ಸದಸ್ಯರು ಮತ್ತು ಅಧಿಕಾರಿಗಳಿಗೆ ಕೊರೋನ ಆತಂಕ ಶುರುವಾಗಿದೆ. ಅಧ್ಯಕ್ಷ ವೆಂಕಟೇಶ್ ಸಂಪರ್ಕದಲ್ಲಿದ್ದವರಿಗೆ ಆತಂಕ ಶುರುವಾಗಿದೆ. ಅನಾರೋಗ್ಯ ಪೀಡಿತ ವೆಂಕಟೇಶ್ ಅವ್ರು ಕೊವಿಡ್ ತಪಾಸಣೆಗೆ ಒಳಗಾದಾಗ ಕೊರೋನಾ ಖಚಿತವಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ವೆಂಕಟೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಧ್ಯಕ್ಷರಿಗೆ ಸೋಂಕು ದೃಢವಾಗುತ್ತಿದ್ದಂತೆ ಇಡೀ ಜಿಲ್ಲಾ ಪಂಚಾಯಿತಿ ಕಚೇರಿಯನ್ನ ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.

ಮತ್ತೊಂದೆಡೆ ಕೆಜಿಎಫ್ ನ ಉರಿಗಾಂಪೇಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯಪೇದೆ ರತ್ನಯ್ಯ ಕೊವಿಡ್​ನಿಂದ ಸಾವನ್ನಪ್ಪಿದ್ದಾರೆ. ಕರ್ತವ್ಯದಲ್ಲಿದ್ದಾಗ ಸೋಂಕು ತಗುಲಿತ್ತು. ಪ್ರಾಥಮಿಕ ಚಿಕಿತ್ಸೆ ಕೋಲಾರದ ಸರ್ಕಾರಿ ಆಸ್ಪತ್ರೆಯಲ್ಲಿ ಕೊಟ್ಟ ನಂತರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದ್ರೆ, ಶುಕ್ರವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ರತ್ನಯ್ಯ ಸಾವನ್ನಪ್ಪಿದ್ದಾರೆ.

-ಆರ್.ಶ್ರೀನಿವಾಸಮೂರ್ತಿ

RELATED ARTICLES

Related Articles

TRENDING ARTICLES