Friday, January 3, 2025

ವೈದ್ಯರ ಮನವೊಲಿಸುವಲ್ಲಿ ಶ್ರೀರಾಮುಲು ಯಶಸ್ವಿ..!

ಬಳ್ಳಾರಿ: ನಂಜನಗೂಡು ಟಿಹೆಚ್​​ಒ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಿಳಿದಿದ್ದ ವೈದ್ಯರ ಮನವೊಲಿಸುವಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಯಶಸ್ವಿಯಾಗಿದ್ದಾರೆ. ಶ್ರೀರಾಮುಲು ಅವರ ಮನವಿಗೆ ಸ್ಪಂದಿಸಿ ವೈದ್ಯರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಶ್ರೀರಾಮುಲು, “ನಂಜನಗೂಡು ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಹಾಗೂ ಕೆಲವು ಬೇಡಿಕೆಗಳೊಂದಿಗೆ ಪ್ರತಿಭಟನೆಗೆ ಮುಂದಾಗಿದ್ದ ವೈದ್ಯಾಧಿಕಾರಿಗಳು, ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ಅವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂಬ ನನ್ನ ಭರವಸೆಗೆ ಬೆಲೆ ಕೊಟ್ಟು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿದ್ದಾರೆ” ಎಂದು ತಿಳಿಸಿದ್ದಾರೆ. 

 

RELATED ARTICLES

Related Articles

TRENDING ARTICLES