ದಕ್ಷಿಣ ಕನ್ನಡ : ಶಾಸಕ ಹರೀಶ್ ಪೂಂಜ ಅವರು ಕಳೆದ ವರ್ಷ ನಡೆದ ಪ್ರವಾಹದ ಸಂದರ್ಭದಲ್ಲಿ ‘ಕಾಳಜಿ ಫಂಡ್’ ಹೆಸರಿನಲ್ಲಿ ಸಂಗ್ರಹಿಸಿದ ಹಣದ ಲೆಕ್ಕಕೊಡಿ ಎಂದು ಬೆಳ್ತಂಗಡಿಯಲ್ಲಿ ಶಾಸಕರ ಕಚೇರಿ ಮುಂದೆ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ಮೊದಲು ಮಾಜಿ ಶಾಸಕ ವಸಂತ ಬಂಗೇರ ಅವರ ಕಚೇರಿಯ ಮುಂಭಾಗದಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು. ಬಳಿಕ ಶಾಸಕರ ಸರ್ಕಾರಿ ಕಚೇರಿ ಮುಂಭಾಗಕ್ಕೆ ಮೆರವಣಿಗೆಯಲ್ಲಿ ತೆರಳಲು ಪ್ರಯತ್ನಿಸಿದ ವೇಳೆ ಪೊಲೀಸರು ಅವರನ್ನು ತಡೆಯಲು ಮುಂದಾಗಿದ್ದು, ಈ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಪ್ರತಿಭಟನಾಕಾರರು ಶಾಸಕ ಹರೀಶ್ ಪೂಂಜ ಅವರ ಕಚೇರಿಯ ಮುಂದೆ ಪೊಲೀಸರ ಸೂಚನೆಯನ್ನೂ ಮೀರಿ ಪ್ರತಿಭಟನೆ ನಡೆಸಿದರು.
ಇರ್ಷಾದ್ ಕಿನ್ನಿಗೋಳಿ
ಪವರ್ ಟಿವಿ, ಮಂಗಳೂರು