Thursday, January 23, 2025

ಅಧಿಕೃತವಾಗಿ ಬಿಜೆಪಿ ಸೇರಿದ ಅಣ್ಣಾಮಲೈ ಹೇಳಿದ್ದೇನು?

ನವದೆಹಲಿ : ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕದ ಸಿಂಗಂ ಖ್ಯಾತಿಯ ಅಣ್ಣಾಮಲೈ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಮುರುಳಿಧರ್ ರಾವ್ , ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ​ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರಿದರು. ಅಣ್ಣಾಮಲೈ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಮುರುಳಿಧರ್ ರಾವ್, ಪ್ರಾಮಾಣಿಕ ಹಾಗೂ ನಿಷ್ಠುರ ಕಾರ್ಯವೈಖರಿಗೆ ಹೆಸರಾಗಿದ್ದ ಅಣ್ಣಾಮಲೈ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಸಂತೋಷವಾಗುತ್ತಿದೆ ಅಂತ ಹೇಳಿದರು.
ಅಣ್ಣಾಮಲೈ ಮಾತನಾಡಿ, ಬಿಜೆಪಿ ರಾಷ್ಟ್ರವಾದ ಹಾಗೂ ಅಭಿವೃದ್ಧಿ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ.  ಪ್ರಧಾನಿ ಮೋದಿ  ಅವರ ಅಭಿವೃದ್ಧಿ ಪರ ರಾಜಕಾರಣ ಮತ್ತು ದೇಶವನ್ನು ಅವರು ಮುನ್ನಡೆಸುತ್ತಿರುವ ರೀತಿ ಅನನ್ಯ. ದೇಶ 21ನೇ ಶತಮಾನದ ಪ್ರಶ್ನಾತೀತ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದರು. ತಮಿಳು ನಾಡಿನಲ್ಲಿ ಬಿಜೆಪಿಯನ್ನು ಸಂಘಟಿಸಿ ಅಧಿಕಾರಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಅಂತ ಭರವಸೆ ನೀಡಿದ್ರು.

RELATED ARTICLES

Related Articles

TRENDING ARTICLES