ಮಂಡ್ಯ: ಕೊವಿಡ್ ನಿಯಂತ್ರಣ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗರ್ಭಿಣಿಯೊಬ್ಬರು ಸಾವಿಗೀಡಾದ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಚಿನ್ನೇನಹಳ್ಳಿಯಲ್ಲಿ ನಡೆದಿದೆ.
ಚಿನ್ನೇನಹಳ್ಳಿ ಗ್ರಾಮದ 7 ತಿಂಗಳ ಗರ್ಭಿಣಿ ವೀಣಾ(27) ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೃತ ಪಟ್ಟಿದ್ದು, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಹೊಟ್ಟೆ ನೋವು ಕಾಣಿಸಿಕೊಂಡಿದ್ದ ವೀಣಾ ಅವರನ್ನ ಆಗಸ್ಟ್ 18ರಂದು ಮಂಡ್ಯದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ವೈದ್ಯರ ಸಲಹೆಯಂತೆ ಕೊರೋನಾ ತಪಾಸಣೆಯನ್ನು ಆಗಸ್ಟ್ 20ರಂದು ಕ್ಯಾತುಂಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಮಾಡಿಸಲಾಗಿತ್ತು.ಆಗಸ್ಟ್ 21ರಂದು ವರದಿಯಲ್ಲಿ ಪಾಸಿಟಿವ್ ಬಂದರೂ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳದೇ ನಿರ್ಲಕ್ಷ್ಯ ಮಾಡಲಾಗಿತ್ತು. ಕಳೆದ ರಾತ್ರಿ ಉಸಿರಾಟದ ಸಮಸ್ಯೆಯಿಂದ ಗರ್ಭಿಣಿ ಸಾವಿಗೀಡಾಗಿದ್ದು, ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂದು ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ.
ವೈದ್ಯರು, ಅಧಿಕಾರಿಗಳ ನಿರ್ಲಕ್ಷ್ಯ; ಕೊರೋನಾ ಸೋಂಕಿತ ಗರ್ಭಿಣಿ ಸಾವು.
TRENDING ARTICLES