ಬಾಗಲಕೋಟೆ : ನರೇಗಾ ಯೋಜನೆಯಡಿ ಶಾಲಾವರಣದಲ್ಲಿ ಕಿಚನ್ ಗಾರ್ಡನ್ ಹಾಗೂ ಇನ್ನಿತರ ಕಾಮಗಾರಿ ಕೈಗೊಳ್ಳುವ ಮೂಲಕ ತಾಲೂಕಿಗೊಂದು ಮಾದರಿ ಶಾಲೆಯನ್ನಾಗಿ ಪರಿವರ್ತಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ ಅಥೀಕ್ ಸೂಚಿಸಿದರು.
ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರೌಢಶಾಲಾ ಆವರಣದಲ್ಲಿ ಸಸಿ ನೆಡುವುದು, ಶಾಲಾ ಕಾಂಪೌಂಡ್, ಶೌಚಾಲಯ ಹಾಗೂ ಕಿಚನ್ ಗಾರ್ಡನ್ ಕಾರ್ಯ ಕೈಗೊಳ್ಳುವ ಮೂಲಕ ಮಕ್ಕಳಿಗೆ ಉತ್ತಮ ವಾತಾವರಣ ರೂಪಿಸಲು ಕ್ರಿಯಾ ಯೋಜನೆ ತಯಾರಿಸಿ ಮಾದರಿ ಶಾಲೆಯನ್ನಾಗಿ ಪರಿವರ್ತಿಸಬೇಕು, ಸ್ವಚ್ಛ ಭಾರತ ಮತ್ತು ಮನರೇಗಾ ಯೋಜನೆಯಡಿಯಲ್ಲಿರುವ ಸೌಲಭ್ಯಗಳನ್ನು ಶಿಕ್ಷಣ ಇಲಾಖೆಯವರು ಪಡೆದುಕೊಂಡು ಶಾಲೆಗಳನ್ನು ಅಭಿವೃದ್ದಿ ಪಡಿಸಿಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಶಾಲಾ ಅಭಿವೃಧ್ದಿಗೆ ಹಂತ ಹಂತವಾಗಿ ಅಭಿವೃದ್ಧಿ ಪಡಿಸುವ ಕುರಿತು ಕ್ರಿಯಾ ಯೋಜನೆಗಳನ್ನು ರೂಪಿಸುವಂತೆ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು. ಖಾಸಗಿ ಶಾಲೆ ಮೀರಿಸುವಂತ ವಾತಾವರಣ ನಿರ್ಮಾಣಕ್ಕೆ ಮುಂದಾಗಲು ತಿಳಿಸಿದರು.