ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಎರಡನೇ ಬಾರಿ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಜಿಲ್ಲಾಧಿಕಾರಿ ಮನೆಯಲ್ಲಿ ಅಡುಗೆ ಮಾಡುವವರಿಗೆ ಕೊರೋನ ಪಾಸಿಟಿವ್ ಬಂದ ಹಿನ್ನೆಲೆ ಜಿಲ್ಲಾಧಿಕಾರಿ ಕೂಡ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಜಿಲ್ಲಾಧಿಕಾರಿ ಮನೆಯ ಅಡುಗೆ ಭಟ್ಟರಿಗೆ ಕೊರೋನ ಪಾಸಿಟಿವ್ ಬಂದಿದ್ದು, ಜಿಲ್ಲಾಧಿಕಾರಿ ಕೂಡ ಪ್ರೈಮರಿ ಕಂಟಾಕ್ಟ್ ಆಗಿರೋದ್ರಿಂದ ಅವರು ಹೋಂ ಕ್ವಾರಂಟೈನ್‍ನಲ್ಲಿದ್ದಾರೆ. ಬಗಾದಿ ಗೌತಮ್ ಹೋಂ ಕ್ವಾರಂಟೈನ್‍ಗೆ ಒಳಗಾಗ್ತಿರೋದು ಇದು ಎರಡನೇ ಬಾರಿ. ಕಂದಾಯ ಸಚಿವ ಆರ್. ಅಶೋಕ್ ಚಿಕ್ಕಮಗಳೂರಿಗೆ ಬಂದು ಹೋದ ಬಳಿಕ ಪ್ರವಾಸೋಧ್ಯಮ ಸಚಿವ ಸಿ.ಟಿ.ರವಿಯವರಿಗೂ ಕೊರೋನ ಪಾಸಿಟಿವ್ ಬಂದಿತ್ತು. ಆಗಲೂ ಡಿಸಿ ಬಗಾದಿ ಗೌತಮ್ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದರು. ವೈದ್ಯರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಒಂದು ವಾರಗಳ ಕಾಲ ಹೋಂ ಕ್ವಾರಂಟೈನ್‍ಗೆ ಮುಂದಾಗಿದ್ದಾರೆ. ಸದ್ಯಕ್ಕೆ ಡಿಸಿ ಬಗಾದಿ ಗೌತಮ್ ಅವರಿಗೆ ಕೊರೋನ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಆದರೂ, ಒಂದು ವಾರಗಳ ಕಾಲ ಡಿಸಿ ಹೋಂ ಕ್ವಾರಂಟೈನ್‍ಗೆ ಮುಂದಾಗಿದ್ದಾರೆ. ಇದೇ ವೇಳೆ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಮತ್ತೋರ್ವ ನೌಕರನಿಗೂ ಪಾಸಿಟಿವ್ ಬಂದಿದೆ. ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯ 20ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಕೊರೋನ ಪರೀಕ್ಷೆ ನಡೆಸಲಾಗಿದೆ. ಅವರೆಲ್ಲರ ವರದಿಯೂ ನೆಗೆಟಿವ್ ಬಂದಿದೆ…
ಸಚಿನ್ ಶೆಟ್ಟಿ ಚಿಕ್ಕಮಗಳೂರು…