ಹುಬ್ಬಳ್ಳಿ : ನಾವು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬಂದಾಗ ಆ ಪಕ್ಷದ ತತ್ವ, ಸಿದ್ಧಾಂತಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಹಿರಿಯರಾದ ಎಚ್. ವಿಶ್ವನಾಥ್ ಅನಗತ್ಯವಾಗಿ ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡಬಾರದು ಎಂದು ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವ ಶಿವರಾಮ ಹೆಬ್ಬಾರ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ವಿಶ್ವನಾಥ್ ಯಾವ ಸಂದರ್ಭದಲ್ಲಿ ಟಿಪ್ಪುಸುಲ್ತಾನ್ ಕುರಿತು ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಬಿಜೆಪಿ ಸೇರಿದ ಮೇಲೆ ಅವರು ಪಕ್ಷದ ನಿಲುವಿಗೆ ಬದ್ಧರಾಗಿರಬೇಕು. ಪಕ್ಷದ ಸಿದ್ಧಾಂತಕ್ಕೆ ಹೊಂದಿಕೊಳ್ಳಬೇಕು. ಗುರುವಾರ ಅವರಿಗೆ ಕರೆ ಮಾಡಿದರೆ ಸಿಗಲಿಲ್ಲ. ಯಾರೂ ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದು ಎಂದ್ರು.
ಇದೆ ವೇಳೆ ಮಾತನಾಡಿದ ಅವರು ಇಎಸ್ ಐ ಆಸ್ಪತ್ರೆಗಳಲ್ಲಿ ಪ್ರತಿವರ್ಷ ಸಾಕಷ್ಟು ಔಷಧಿಗಳು ಉಳಿಯುತ್ತಿವೆ. ಆದ್ದರಿಂದ ಇಎಸ್‌ಐ ಕಾರ್ಡ್ ಇಲ್ಲದವರಿಗೂ ಔಷಧಿಗಳನ್ನು ಕೊಡಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಇದಕ್ಕೆ ಕಾನೂನಿನಲ್ಲಿ ತೊಡಕುಗಳಿದ್ದು, ಬೆಂಗಳೂರಿನಲ್ಲಿ ಸೆ. 4 ಮತ್ತು 5ರಂದು ನಡೆಯುವ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದ್ರು…
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಎಲ್ಲೆಡೆಯೂ ಆಸ್ಪತ್ರೆಯಲ್ಲಿ ಬೆಡ್ ಫುಲ್ ಆಗಿದ್ದು, ಹುಬ್ಬಳ್ಳಿಯ ಇಎಸ್ಐ ಆಸ್ಪತ್ರೆಯಲ್ಲಿ ಯಾವೊಂದು ಕೊರೋನಾ ಸೋಂಕಿತರು ಚಿಕಿತ್ಸೆಗೆ ದಾಖಲಾಗದೇ ಇರುವುದು ಬೇಸರದ ಸಂಗತಿ ಎಂದು ಜಿಲ್ಲಾಡಳಿತದ ವಿರುದ್ದ ಸಚಿವ ಶಿವರಾಮ ಹೆಬ್ಬಾರ ಅಸಮದಾನ ಹೊರಹಾಕಿದ್ರು. ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು,ಆಸ್ಪತ್ರೆಯಲ್ಲಿ ಆಡಳಿತ ಮಂಡಳಿಯ ನಿಷ್ಕಾಳಜಿ ಕುರಿತು ಬೇಸರ ವ್ಯಕ್ತಪಡಿಸಿದರು. ಈಗಾಗಲೇ ಖಾಸಗಿ ಆಸ್ಪತ್ರೆಯಲ್ಲಿ ಕೂಡ ಬೇಡ್ ಫುಲ್ ಆಗುತ್ತಾ ಬಂದಿದ್ದರೂ ಇಎಸ್ಐ ಆಸ್ಪತ್ರೆಯಲ್ಲಿ ಯಾವೊಂದು ಕೊರೊನಾ ಸೋಂಕಿತ ವ್ಯಕ್ತಿಯು ಚಿಕಿತ್ಸೆಗೆ ದಾಖಲಾಗಿಲ್ಲ ಎಂದರೇ ಹೇಗೆ..? ಕೋಟ್ಯಾಂತರ ರುಪಾಯಿ ವೆಚ್ಚ ಮಾಡಿ ಸಾರ್ವಜನಿಕರ ಸೇವೆಗೆ ಕೈ ಜೋಡಿಸಲಾಗಿದೆ. ಆದ್ರೆ ಸೂಕ್ತ ವ್ಯವಸ್ಥೆ ಕೊರತೆಯಿಂದ ಅವ್ಯವಸ್ಥೆ ಉಂಟಾಗಿದೆ ಎಂದು ವೈದ್ಯರಿಗೆ ಹಾಗೂ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡ್ರು..