ವಿಜಯಪುರ : ಶಾರ್ಟ್ ಸರ್ಕ್ಯೂಟ್ ನಿಂದ ಟಿಸಿಗೆ ಬೆಂಕಿ ಹತ್ತಿ ಸ್ಫೋಟವಾದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಹತ್ತಿರದ ಟಿಸಿಯಲ್ಲಿ ಮೊದಲು ಬೆಂಕಿ ಹತ್ತಿಕೊಂಡಿದೆ. ಅದರ ದೃಶ್ಯಗಳನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿಯಲು ಮುಂದಾಗಿದ್ದಾರೆ. ಆಗ ಏಕಾಏಕಿ ಹೊತ್ತಿ ಉರಿಯುತ್ತಿದ್ದ ಟಿಸಿ ಸ್ಪೋಟಗೊಂಡಿದೆ. ಇದರಿಂದ ಸ್ಥಳೀಯರು ಕಕ್ಕಾಬಿಕ್ಕಿಯಾಗಿ ಓಡಿದ್ದಾರೆ. ಇನ್ನು ಈ ಘಟನೆಯಿಂದ ಗ್ರಾಮಸ್ಥರಲ್ಲಿ ಕೆಲ ಹೊತ್ತು ಭಯದ ವಾತಾವರಣ ಸೃಷ್ಟಿಯಾಗಿತ್ತು. ಟಿಸಿ ಬೇರೆಡೆಗೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದರು ಹೆಸ್ಕಾಂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂಬುದು ಗ್ರಾಮಸ್ಥರ ಆರೋಪ. ಕಾರಣ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ…