ದುಬೈ : 13 ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣೆಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್ ಸಿ ಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದೆ.
ಹೌದು ಗೋ ಗ್ರೀನ್ ಉಪಕ್ರಮದ ಒಂದು ಭಾಗವಾಗಿ ಹಸಿರು ಜರ್ಸಿಯಲ್ಲಿ ವಿರಾಟ್ ಕೊಹ್ಲಿ ಪಡೆ ಆಡಲಿದೆ. ಭೂಮಿಯನ್ನು ಹಸಿರಾಗಿಟ್ಟುಕೊಳ್ಳುವಂತೆ ಜಾಗೃತಿ ಮೂಡಿಸಲು ಆರ್ ಸಿಬಿ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ಹಸಿರು ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
25 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಹಸಿರು ಜೆರ್ಸಿಯೊಂದಿಗೆ ಆಡಲಿದ್ದೇವೆ ಎಂದು ಎ ಬಿ ಡಿವಿಲಿಯರ್ಸ್ ಹೇಳಿರುವ ವಿಡಿಯೋವನ್ನು ಆರ್ ಸಿಬಿ ತನ್ನ ಅಧಿಕೃತ ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದೆ. ಗೋ ಗ್ರೀನ್ ಉಪಕ್ರಮವನ್ನು ಬೆಂಬಲಿಸಬೇಕೆಂದು ಆರ್ ಸಿಬಿ ಆಟಗಾರರು ಕೋರಿದ್ದಾರೆ.