Thursday, May 15, 2025

ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ: ಡಿ.ಕೆ.ಶಿವಕುಮಾರ

ಬೆಂಗಳೂರು: ಪ್ರೀಡಂ ಪಾರ್ಕನ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಸಭೆ ಮುಗಿದ ಬಳಿಕ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ರೈತ ಪರವಾಗಿರುತ್ತೆ. ನಾವು ರೈತರ ಪರವಾಗಿ ಹೋರಾಟ ಮಾಡುತ್ತಿದ್ದೇವೆ. ನಾವು ರೈತರ ಪರ ಧ್ವನಿ ಎತ್ತಿದ್ದೇವೆ. ಅನ್ನದಾತರಿಗಾಗಿ ನಾವು ಜೈಲಿಗೆ ಹೋಗಲು ಸಿದ್ದರಿದ್ದೇವೆ ಎಂದರು. ಇದು ಕಾಂಗ್ರೆಸ್ ಸಮಾವೇಶ ಅಲ್ಲ. ಇದು ರೈತರ ಕಾರ್ಯಕ್ರಮ. ಕೊರೋನಾ ವೇಳೆ ರೈತರಿಗೆ ಅನ್ಯಾಯವಾಗಿದೆ. ಕೊರೋನಾ ವೇಳೆ ರೈತರ ಖಾತೆಗೆ ಹಣ ಹಾಕುತ್ತೇವೆ ಎಂದು ಹೇಳಿದ್ದರು. ಯಾರಿಗೆ ಹಾಕಿದ್ದಿರಿ ದಾಖಲೆ ಕೊಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ಡಿ. ಕೆ ಶಿವಕುಮಾರ ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES