Wednesday, January 22, 2025

‘ಇಂದು ವಿಧಾನಮಂಡಲ ಕಲಾಪ ಆರಂಭ’

ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಕಲಾಪ ಆರಂಭವಾಗಲಿದ್ದು, ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ, ಇತ್ತೀಚಿನ ಖಾತೆ ಹಂಚಿಕೆ ಗೊಂದಲ, ವಿಧಾನಪರಿಷತ್ ನ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ಸೇರಿದಂತೆ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ವೇದಿಕೆ ಸಜ್ಜಾಗಿದೆ.

ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ವಜುಭಾಯ ವಾಲಾ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಇತ್ತೀಚೆಗೆ ಅಗಲಿದ ಉಪಸಭಾಪತಿ ಧರ್ಮೇಗೌಡ ಸೇರಿದಂತೆ ಮಾಜಿ ಶಾಸಕರು ಮತ್ತು ಗಣ್ಯರಿಗೆ ಸಂತಾಪ ಸೂಚನೆ ನಿರ್ಣಯ ಕೈಗೊಳ್ಳಲಾಗುತ್ತದೆ. ನಂತರ ಸದನವನ್ನು ನಾಳೆಗೆ ಮುಂದೂಡಲಾಗುತ್ತದೆ. ನೂತನ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ, ಶಿವಮೊಗ್ಗ ತಾಲೂಕಿನ ಹುಣಸೋಡು ಸ್ಪೋಟ ಪ್ರಕರಣ, ಖಾತೆ ಹಂಚಿಕ, ನಾಯಕತ್ವ ಬದಲಾವಣೆಯ ವದಂತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಜಟಾಪಟಿ ನಡೆಯುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES