Wednesday, October 30, 2024

‘ಸುಧಾಕರ್ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಓಪನ್ ಚಾಲೆಂಜ್’

ಬೆಂಗಳೂರು: ಸಚಿವ ಸುಧಾಕರ್ ಹೇಳಿಕೆ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಏಕಪತ್ನಿ ವ್ರತಸ್ಥ ಹ್ಯಾಶ್ ಟ್ಯಾಗ್ ಬಳಸಿ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು  ಸಾರ್ವಜನಿಕವಾಗಿ ಸ್ಪಷ್ಟ ಪಡಿಸಬೇಕು. ಸುಧಾಕರ್ ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುತ್ತದೆ. ಸ್ಪೀಕರ್ ಕಾಗೇರಿ, ಬಿಎಸ್ ವೈ ಸೇರಿ ಎಲ್ಲರೂ ಸ್ಪಷ್ಟಪಡಿಸಬೇಕು ಎಂದು ಟ್ವಿಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಓಪನ್ ಚಾಲೆಂಜ್ ಮಾಡಿದ್ದಾರೆ.

1955 ರ ಹಿಂದೂ ವಿವಾಹ ಕಾಯ್ದೆ ಪ್ರಕಾರ ಬಹುಪತ್ನಿತ್ವ  ಅಪರಾಧ. ಸುಧಾಕರ್ ವಿರುದ್ಧ ಐಪಿಸಿ ಸೆಕ್ಷನ್ 494, 495ರ ಅಡಿ ಕಾನೂನು ಕ್ರಮ ಜರುಗಿಸಬೇಕು. ಕೂಡಲೇ ಸುಧಾಕರ್ ಹೇಳಿಕೆ ಬಗ್ಗೆ ತನಿಖೆಗೆ  ಆಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ ಮೂಲಕ ಆಗ್ರಹಿಸಿದ್ದಾರೆ.

 

 

 

RELATED ARTICLES

Related Articles

TRENDING ARTICLES