ಬೆಂಗಳೂರು: ಕೊರೋನಾ ಸಂಕಷ್ಟ ಕಾಲದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಅನ್ನಭಾಗ್ಯ ಅಕ್ಕಿ ಒಬ್ಬರಿಗೆ 2 ಕೆಜಿಗೆ ಇಳಿಸಿ ಬಡವರ ಹೊಟ್ಟೆಗೆ ಬರೆ ಎಳೆದಿದೆ.
ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಒಬ್ಬರಿಗೆ 7 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಸಮ್ಮಿಶ್ರ ಸರ್ಕಾರದ ವೇಳೆಯಲ್ಲಿ 5 ಕೆಜಿಗೆ ಇಳಿಸಲಾಗಿತ್ತು. ಆದರೆ ಯಡಿಯೂರಪ್ಪ ಸಿಎಂ ಆದ ಸಂದರ್ಭದಲ್ಲಿ 4 ಕೆಜಿಗೆ ಇಳಿಕೆ ಮಾಡಲಾಯಿತು. ಏಪ್ರಿಲ್ ನಲ್ಲಿ ಒಬ್ಬರಿಗೆ 2 ಕೆಜಿ ಮಾತ್ರ ಬಿಜೆಪಿ ಸರ್ಕಾರ ನೀಡುತ್ತಿದೆ. ಬಿಪಿಎಲ್ ಕಾರ್ಡ್ ದಾರರು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ.
ಕೊರೋನಾ ಸಂಕಷ್ಟದ ಸಮಯದಲ್ಲಿ ಬಡವರ ಅಕ್ಕಿ ಗೆ ಕತ್ತರಿ ಹಾಕಿರುವ ಸರ್ಕಾರ. ಕೊವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಬಡವರಿಗೆ ಅಕ್ಕಿ ಕೊಡುವುದಕ್ಕೆ ಸರ್ಕಾರದ ಬಳಿ ಹಣ ಇಲ್ಲವೇ? ಬಡವರ ವಿರೋಧಿ ಸರ್ಕಾರ ಬೇಕೇ? ಕೆಲಸದವಿಲ್ಲದೇ ಕೂಲಿ ಕಾರ್ಮಿಕರು ಪರದಾಡುತ್ತಿದ್ದಾರೆ. ಇಂತಹ ಲಾಕ್ ಡೌನ್ ಸಂದರ್ಭದಲ್ಲಿ ಅಕ್ಕಿ ಕಡಿತ ಮಾಡಿದರೆ ಹೇಗೆ?
2013ರಲ್ಲಿ ಸಿದ್ದರಾಮಯ್ಯ ಜಾರಿಗೆ ತಂದ ಅನ್ನಭಾಗ್ಯ ಯೋಜನೆಯು 1.22 ಕೋಟಿ ಕುಟುಂಬಗಳ 4.27 ಕೋಟಿ ಜನ ಇದರ ಫಲಾನುಭವಿಗಳಾಗಿದ್ದರು. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತವಾಗಿ ಅಕ್ಕಿ ವಿತರಣೆ ಮಾಡಲಾಗುತ್ತಿತ್ತು. ಮೊದಲು ಒಬ್ಬರಿಗೆ 5 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ನಂತರ 7 ಕೆಜಿ ವಿತರಣೆ ಮಾಡಲಾಗುತ್ತಿತ್ತು. ಪ್ರತಿ ತಿಂಗಳು 2.18 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಕೆ ಮಾಡಲಾಗುತ್ತಿತ್ತು. ಸರ್ಕಾರಕ್ಕೆ ಹೊರೆಯಾಗುತ್ತಿದೆ ಎಂಬ ಕಾರಣಕ್ಕೆ ಕೊರೋನಾ ಕಾಲದಲ್ಲಿ ಹಂತ ಹಂತವಾಗಿ ರಾಜ್ಯ ಸರ್ಕಾರ ಕೇವಲ ಒಬ್ಬರಿಗೆ 2 ಕೆಜಿ ಇಳಿಕೆ ಮಾಡಿದೆ.