ನವದೆಹಲಿ : ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಮೂರು ದಿನಗಳ ‘ ರಾಷ್ಟ್ರ ರಕ್ಷಾ ಸಮರ್ಪಣ್ ಪರ್ವ್’ ಉದ್ಘಾಟಿಸಿದರು. ಇದನ್ನ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಭಾಗವಾಗಿ ಆಚರಿಸಲಾಗುತ್ತಿದೆ.
ಇದೇ ನವೆಂಬರ್ 19ರಿಂದ ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿ 100 ಹೊಸ ಸೈನಿಕ ಶಾಲೆಗಳ ಸ್ಥಾಪನೆ, ಎನ್‌ಸಿಸಿ ಗಡಿ ಮತ್ತು ಕರಾವಳಿ ಯೋಜನೆ, ಎನ್‌ಸಿಸಿ ಅಲುಮ್ನಿ ಅಸೋಸಿಯೇಷನ್ ಮತ್ತು ಎನ್‌ಸಿಸಿ ಕೆಡೆಟ್‌ಗಳಿಗೆ ಸಿಮ್ಯುಲೇಶನ್ ತರಬೇತಿಯ ರಾಷ್ಟ್ರೀಯ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಲಿದ್ದಾರೆ.
ಯುಪಿ ಡಿಫೆನ್ಸ್ ಇಂಡಸ್ಟ್ರಿಯಲ್ ಕಾರಿಡಾರ್‌ನ ಝಾನ್ಸಿ ನೋಡ್‌ನಲ್ಲಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್‌ನ 400 ಕೋಟಿ ರೂಪಾಯಿ ಯೋಜನೆಗೆ ಶಂಕುಸ್ಥಾಪನೆ ಕೂಡ ನಡೆಯಲಿದೆ. ಜತೆಗೆ ರಾಷ್ಟ್ರೀಯ ಯುದ್ಧ ಸ್ಮಾರಕ, ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಿದ್ದು ದೇಶೀಯವಾಗಿ ಅಭಿವೃದ್ಧಿಪಡಿಸಿದ ಲಘು ಯುದ್ಧ ಹೆಲಿಕಾಪ್ಟರ್ ಮತ್ತು ಡ್ರೋನ್‌ಗಳನ್ನು ಸಶಸ್ತ್ರ ಪಡೆಗಳಿಗೆ ಹಸ್ತಾಂತರಿಸಲಿದ್ದಾರೆ.