ಬೆಂಗಳೂರು : ಸುಮಾರು 355 ದಿನದ ಅನ್ನದಾತರ ನಿರಂತರ ಹೋರಾಟಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದೆ. ಕಳೆದ ವರ್ಷ ಕೇಂದ್ರ ಸರ್ಕಾರ 3 ಕೃಷಿ ಕಾನೂನುಗಳನ್ನು (ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ, ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆ) ಜಾರಿಗೊಳಿಸಿತ್ತು.
ಈ ಕುರಿತಂತೆ 3 ಕೃಷಿ ಕಾಯ್ದೆ ವಾಪಸ್ ಪಡೆಯಲು ದೇಶಾದ್ಯಂತ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಕಳೆದ 1 ವರ್ಷದಿಂದ ರೈತರು ದೆಹಲಿಯ ಸಿಂಘುಗಡಿಯಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.
ಇನ್ನು ನವೆಂಬರ್ 26, 2020ರಲ್ಲಿ ರೈತರು ಹೋರಾಟವನ್ನ ತೀವ್ರಗೊಳಿಸಿದ್ದರು, ಈ ಕೃಷಿ ಕಾಯ್ದೆ ಹೋರಾಟದಲ್ಲಿ ಸುಮಾರು 600ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದರು. ಇದೀಗ ಕೊನೆಗೂ ರೈತರ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಿದೆ.ಮೂರು ವಿವಾಧಿತ ಕೃಷಿ ಕಾನೂನನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ.