Wednesday, January 22, 2025

ಆಂಧ್ರ ಪ್ರದೇಶದಲ್ಲಿ ಮನೆ ಕುಸಿತ : 4 ಮಂದಿ ಸಾವು 

ಆಂಧ್ರ ಪ್ರದೇಶದ  : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹ ಪರಿಸ್ಥಿತಿಗೆ ಜನರು ತತ್ತರಿಸಿ ಹೋಗಿದ್ದಾರೆ. ಆ ಘಟನೆ ಮಾಸುವ ಮುನ್ನವೇ  ಮತ್ತೊಂದು ದುರಂತ ಸಂಭವಿಸಿದ್ದು, ಕದಿರಿ ಪಟ್ಟಣದಲ್ಲಿ ಕಟ್ಟಡವೊಂದು ಕುಸಿದು ನಾಲ್ಕು ಮಂದಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಕದಿರಿ ಪಟ್ಟಣದಲ್ಲಿ ಈ ದುರಂತ ಸಂಭವಿಸಿದ್ದು, ನಿರಂತರ ಮಳೆಯಿಂದಾಗಿ ಇಲ್ಲಿನ ಓಲ್ಡ್ ಚೇರ್ಮನ್ ಸ್ಟ್ರೀಟ್‌ನಲ್ಲಿರುವ  ಎರಡಂತಸ್ತಿನ ಕಟ್ಟಡ ಕುಸಿದಿದೆ. ಇದರ ಪರಿಣಾಮ ಮನೆಯಲ್ಲಿದ್ದ ಮೂರು ಮಕ್ಕಳು, ಓರ್ವ ಹಿರಿಯ ಮಹಿಳೆ ಕಟ್ಟಡದ ಅವಶೇಷಗಳಡಿ ಸಿಲುಕಿ  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಇನ್ನು ಮಹಿಳೆ ಮತ್ತು ಮಕ್ಕಳು ಇದ್ದ ಮನೆಯ ಪಕ್ಕದಲ್ಲೇ ಮತ್ತೊಂದು ಮನೆ ನಿರ್ಮಾಣವಾಗುತ್ತಿತ್ತು. ಮಳೆಯಿಂದಾಗಿ ನಿರ್ಮಾಣ ಹಂತದ ಮನೆಯ ಅಡಿಪಾಯ ಹಾಳಾಗಿತ್ತು. ಹೀಗಾಗಿ ಆ ಮನೆ ಹಳೆಯ ಮನೆ ಮೇಲೆ ಕುಸಿದು ಈ ಅವಘಡ ಸಂಭವಿಸಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸುಮಾರು 10 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ತಕ್ಷಣವೇ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಆರು ಜನರನ್ನು ರಕ್ಷಿಸಿದ್ದಾರೆ. ಅಲ್ಲದೇ ಜೆಸಿಬಿ ಮೂಲಕ ಅವಶೇಷಗಳನ್ನು ತೆಗೆಯುವ ಕಾರ್ಯ ಮುಂದುವರಿದಿದೆ.

RELATED ARTICLES

Related Articles

TRENDING ARTICLES