Wednesday, October 30, 2024

ಪಕ್ಷದ ನಿರ್ಣಯ ಗೌರವಿಸುವೆ : ಎಸ್ ಆರ್ ಪಾಟೀಲ್

ಬಾಗಲಕೋಟೆ : ಹಿರಿಯ ಕಾಂಗ್ರೆಸ್ ನಾಯಕ ಎಸ್ ಆರ್ ಪಾಟೀಲ್ ಅವರಿಗೆ ಈ ಬಾರಿ MLC ಟಿಕೆಟ್ ನಿರಾಕರಿಸಲಾಗಿದೆ. ಆದರೆ ಅಸಮಾಧಾನದ ನಡುವೆಯೂ ಸಮಾಧಾನದ ಮಾತನಾಡಿದ್ದಾರೆ.

ಯಾವ ಕಾರಣಕ್ಕಾಗಿ ಪಕ್ಷ ನನಗೆ ಟಿಕೆಟ್ ನೀಡಲಿಲ್ಲ ಎನ್ನುವುದು ಗೊತ್ತಾಗಿಲ್ಲ. ಈ ಹಿಂದಿನಂತೆ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುವೆ ಎಂದು ಹೇಳಿ ತಮ್ಮ ಪಕ್ಷ ನಿಷ್ಠೆ ಮೆರೆದಿದ್ದಾರೆ.ಟಿಕೆಟ್ ಕೈತಪ್ಪಿರುವ ಕುರಿತು ದೂರವಾಣಿ ಮೂಲಕ ಮಾತನಾಡಿದ ಅವರು, ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಪಕ್ಷ ಕೈಗೊಂಡಿರುವ ನಿರ್ಣಯವನ್ನು ಗೌರವಿಸುತ್ತೇನೆ.

ಕಳೆದ 45 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ಧನಾಗಿ, ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿರುವೆ. ಸತತ ನಾಲ್ಕು ಬಾರಿ ಅವಿಭಜಿತ ವಿಜಯಪುರ ಜಿಲ್ಲೆಯ ಜನಪ್ರತಿತಿಧಿಯಾಗಿ ಕೆಲಸ ಮಾಡಿರುವೆ. ಇದೀಗ ಪಕ್ಷದ ಟಿಕೆಟ್ ಕೈತಪ್ಪಿರುವುದಕ್ಕೆ ಬೇಸರವಿಲ್ಲ. ರಾಜಕಾರಣದಲ್ಲಿ ಏಳು ಬೀಳುಗಳು ಸಾಮಾನ್ಯ ಎಂದಿದ್ದಾರೆ.ಅಲ್ಲದೇಹಾಲಕೆರೆ ಅಭಿನವ ಸಂಗನಬಸವ ಶ್ರೀಗಳ ಅಂತಿಮ ದರ್ಶನಕ್ಕೆ ಹೋಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ್ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

RELATED ARTICLES

Related Articles

TRENDING ARTICLES