ಧಾರವಾಡ : ಧಾರವಾಡದ ಸತ್ತೂರಿನಲ್ಲಿರುವ ಎಸ ಡಿ ಎಂ ಆಸ್ಪತ್ರೆ ಕೊರೊನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ. ನಿನ್ನೆವರೆಗೆ 66 ಜನರಲ್ಲಿ ಕಂಡು ಬಂದಿದ್ದ ಸೋಂಕು ಇಂದು ಮತ್ತೆ 112 ಜನರಲ್ಲಿ ಕಂಡು ಬಂದಿದೆ. ಹೀಗಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಆಸ್ಪತ್ರೆ ಸುತ್ತಮುತ್ತಲಿನ 500 ಮೀಟರ ವ್ಯಾಪ್ತಿಯಲ್ಲಿನ ಅಂಗನವಾಡಿ ಮತ್ತು ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಮತ್ತೊಂದೆಡೆ ತುರ್ತು ಚಿಕಿತ್ಸೆ ಅಗತ್ಯ ಇರುವವರಿಗೆ ಮಾತ್ರ ಆಸ್ಪತ್ರೆಗೆ ಪ್ರವೇಶ ನೀಡಲಾಗಿದ್ದು, ಹೊರ ರೋಗಿಗಳ ವಿಭಾಗವನ್ನು ಮುಚ್ಚುವoತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಆಸ್ಪತ್ರೆಯ ಪ್ರತಿಯೊಬ್ಬ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ಸೊಂಕೀತರ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಜಿಲ್ಲಾಡಳಿತ ಬಿಗಿ ಕ್ರಮ ಕೈಗೊಂಡಿದೆ. ಈಗಾಗಲೇ ಒಂದು ಸಾವಿರ ಜನರ ಪರೀಕ್ಷೆ ಮಾಡಲಾಗಿದ್ದು, ಇನ್ನು ಮೂರು ಸಾವಿರ ಜನ ಸಿಬ್ಬಂದಿಗಳ ಆರ್ ಟಿ ಪಿ ಸಿ ಆರ್ ಪರೀಕ್ಷೆ ಮಾಡಲಾಗುತ್ತಿದೆ. ವೈದ್ಯಕೀಯ ಕಾಲೇಜಿನ ಆವರಣದಲ್ಲಿ 17 ರಂದು ನಡೆದಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಪರೀಕ್ಷೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.