ಕೊರೊನಾ ವೈರಸ್ನ 2ನೇ ಅಲೆಯಿಂದ ಜನ ಜೀವನ ಜೀವನ ತತ್ತರಿಸಿ ಹೋಗಿತ್ತು, ಇದೀಗ ಜನರ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಇದರ ಬೆನ್ನಲ್ಲೇ ಕೆಲ ರಾಜ್ಯಗಳಲ್ಲಿ ಸೋಂಕಿತ ಪ್ರಕರಣ ಮತ್ತಷ್ಟು ಕಾಣಿಸಿಕೊಳ್ಳುತ್ತಿವೆ. ಇದು 3ನೇ ಅಲೆಯ ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಶಾಲಾ-ಕಾಲೇಜುಗಳು ಆರಂಭವಾಗಿದ್ದು, ಮಕ್ಕಳು ಶಾಲೆಗೆ ತೆರಳುತ್ತಿದ್ದರು ಆದರೆ ಶಾಲೆಗಳಲ್ಲಿ ಕಾಲೇಜುಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಪೋಷಕರಲ್ಲಿ ಆತಂಕ ಹೆಚ್ಚಾಗುತ್ತಿದೆ. ಮೊನ್ನೆಯಷ್ಟೇ ರಾಜ್ಯದ ಧಾರವಾಡ ಜಿಲ್ಲೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಹಬ್ಬಿತ್ತು. ಇಂದು ಪ್ರಕರಣಗಳ ಸಂಖ್ಯೆ 306ಕ್ಕೆ ಏರಿಕೆಯಾಗಿದೆ. ಜೊತೆಗೆ ಒಡಿಶಾದ ಸರ್ಕಾರಿ ಬಾಲಕಿಯರ ಶಾಲೆಯ 25 ವಿದ್ಯಾರ್ಥಿಗಳ ಪರೀಕ್ಷೆ ಪಾಸಿಟಿವ್ ಬಂದಿದೆ.
ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸರ್ಕಾರಿ ಬಾಲಕಿಯರ ಶಾಲೆಯ 25 ವಿದ್ಯಾರ್ಥಿಗಳಿಗೆ ಧನಾತ್ಮಕ ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸ್ಥಿತಿ ಸ್ಥಿರವಾಗಿದೆ ಎಂದು ಮುಖ್ಯ ಜಿಲ್ಲಾ ವೈದ್ಯಾಧಿಕಾರಿ ಡಾ.ರೂಪವನೂ ಮಿಶ್ರಾ ಅವರು ತಿಳಿಸಿದ್ದಾರೆ. ಸೋಂಕಿತ ವಿದ್ಯಾರ್ಥಿಗಳನ್ನು ಬುಡಕಟ್ಟು ವಸತಿ ಶಾಲೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಶಾಲೆಯಲ್ಲಿ ಸುಮಾರು 256 ವಿದ್ಯಾರ್ಥಿಗಳು ಮತ್ತು 20 ಸಿಬ್ಬಂದಿ ಇದ್ದು, ಜಿಲ್ಲಾಸ್ಪತ್ರೆಯ ವೈದ್ಯಕೀಯ ತಂಡ ಮತ್ತು ಸಬ್ ಕಲೆಕ್ಟರ್ ಡಾ.ರಜನಿಕಾಂತ್ ಬಿಶ್ವಾಲ್ ಶಾಲೆಯಲ್ಲಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.
ಕಳೆದ ಎರಡು ದಿನಗಳಿಂದ ಕೆಲ ವಿದ್ಯಾರ್ಥಿನಿಯರು ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿದ್ದರು. ಕೋವಿಡ್ ಸೋಂಕು ಲಕ್ಷಣ ಇರುವವರನ್ನು ಪರೀಕ್ಷೆಗೆ ಒಳಪಡಿಸಿದಾಗ 22 ವಿದ್ಯಾರ್ಥಿನಿಯರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಡಾ. ಮಿಶ್ರಾ ಮಾಹಿತಿ ನೀಡಿದ್ದಾರೆ. ನಂತರ ಮತ್ತೆ ಮೂರು ವಿದ್ಯಾರ್ಥಿನಿಯರಲ್ಲಿ ಸೋಂಕು ಪತ್ತೆಯಾಗಿದೆ. ಕೆಲವರು ಆಗ ತಾನೆ ಊರುಗಳಿಂದ ಬಂದವರಾಗಿದ್ದಾರೆ. ತಮ್ಮ ಮನೆಯಲ್ಲೇ ಅವರಿಗೆ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿನಿಯರ ಆರೋಗ್ಯ ದೃಷ್ಟಿಯಿಂದ ಆಂಬ್ಯುಲೆನ್ಸ್‌ನೊಂದಿಗೆ ನಮ್ಮ ವೈದ್ಯಕೀಯ ತಂಡವು ಅಲ್ಲಿದೆ ಮತ್ತು ಡಾ ಅನಿತಾ ಸಿಂಗ್ ನಿಯಮಿತವಾಗಿ ವಿದ್ಯಾರ್ಥಿಗಳನ್ನು ಪರೀಕ್ಷಿಸುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.