Monday, December 23, 2024

ಬಿಜೆಪಿ ಹಿರಿಯ ಮುಖಂಡ ಉರಿಮಜಲು ರಾಮ್​ಭಟ್ ನಿಧನ

ಮಂಗಳೂರು : ಬಿಜೆಪಿ ಹಿರಿಯ ಮುಖಂಡ ಉರಿಮಜಲು ರಾಮ್​ಭಟ್ ನಿಧನರಾಗಿದ್ದು, ಸಾರ್ವಜನಿಕರಿಗೆ ಅವರ ಪಾರ್ಥಿವ ಶರೀರದ ದರ್ಶನಕ್ಕೆ ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವ್ಯವಸ್ಥೆ ಮಾಡಲಾಗಿದೆ.

ಜನಸಂಘದ ಪ್ರಭಾವಿ ನಾಯಕರಾಗಿ, ಏಳು ಬಾರಿ‌ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಎರಡು ಬಾರಿ ಶಾಸಕರಾಗಿ ಜನರಿಗಾಗಿ ಒಳ್ಳೆಯ ಕೆಲಸಗಳನ್ನು ಮಾಡಿ ಬಿಜೆಪಿಯ ಮುಂಚೂಣಿ ನಾಯಕರಾಗಿದ್ದರು. ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿ ಕೆಲ ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಿಸಿದ್ದು, ಮತ್ತೆ ಮನೆಗೆ ಕರೆ ತಂದಿದ್ದರು. ಆದರೆ ಆರೋಗ್ಯದ ಏರುಪೇರಿನಿಂದಾಗಿ ಮನೆಯಲ್ಲೇ ಕೊನೆಯುಸಿರು ಎಳೆದಿದ್ದಾರೆ.

ರಾಮ್ ಭಟ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ, ಆರ್ ಎಸ್ ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹಾಗು ಬಿಜೆಪಿ ಕಾರ್ಯಕರ್ತರು ಮತ್ತು ಸಂಘ ಪರಿವಾರದ ಮುಖಂಡರು, ನಳಿನ್ ಕಟೀಲ್, ಎಸ್.ಅಂಗಾರ ‌ಮತ್ತು‌ ಹಲವು ಗಣ್ಯರಿಂದ ಅಂತಿಮ ದರ್ಶನ ಪಡೆಯಲಾಗಿದೆ.

RELATED ARTICLES

Related Articles

TRENDING ARTICLES