Wednesday, January 22, 2025

ವಿಧಾನ ಪರಿಷತ್ ಚುನಾವಣೆ ಸಿದ್ಧತೆ

ಹಾಸನ : ವಿಧಾನ ಪರಿಷತ್ ಚುನಾವಣೆಗೆ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಇಂದು ನಗರದ ಇಂಜಿನಿಯರಿಂಗ್ ಕಾಲೇಜು ಮೈದಾನ ಸೇರಿ ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಕಾರ್ಯವನ್ನು ನಡೆಸಲಾಯಿತು. ಅಧಿಕಾರಿಗಳಿಗೆ ಮತದಾನದ ಅಗತ್ಯ ಮಾಹಿತಿಯನ್ನು ನೀಡಿ, ಅಧಿಕಾರಿಗಳನ್ನು ಮತಗಟ್ಟೆ ಕೇಂದ್ರಗಳಿಗೆ ಕಳುಹಿಸಿದ್ರು.

ನಾಳೆ ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಇದಕ್ಕಾಗಿ 257 ಮತಗಟ್ಟೆ ಸ್ಥಾಪಿಸಲಾಗಿದೆ. ಜಿಲ್ಲಾದ್ಯಂತ 3578 ಮಂದಿ ಮತದಾನ ಮಾಡುವ ಅವಕಾಶ ಪಡೆದಿದ್ದಾರೆ. ಪ್ರತಿ ಮತಕೇಂದ್ರಕ್ಕೆ ಇಬ್ಬರು ಅಧಿಕಾರಿಗಳಂತೆ 570 ಅಧಿಕಾರಿಗಳನ್ನು ನೇಮಿಸಲಾಗಿದೆ. ಮತದಾನ ಕೇಂದ್ರಗಳಲ್ಲಿ ಅಹಿತಕರ ಘಟನೆ ನಡೆಯದಂತೆ 285 ಮೈಕ್ರೋ ಅಬ್ಸರ್‌ವರ್‌ಗಳನ್ನು ನೇಮಿಸಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಎಲ್ಲಾ ಮತಗಟ್ಟೆಗಳಲ್ಲೂ ವಿಡಿಯೋ ಚಿತ್ರೀಕರಣ ಮಾಡಲಾಗುತ್ತಿದ್ದು, ಇದಕ್ಕಾಗಿ 285 ವಿಡಿಯೋಗ್ರಾಫರ‍್ಸ್ ನೇಮಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಮತಗಟ್ಟೆಗಳ 100 ಮೀಟರ್ ವ್ಯಾಪ್ತಿಯಲ್ಲಿ 144 ಜಾರಿ ಮಾಡಲಾಗಿದೆ. ಚುನಾವಣಾ ಕಾರ್ಯಕ್ಕಾಗಿ 30 ಸಾರಿಗೆ ಬಸ್, 14 ಮ್ಯಾಕ್ಸಿಕ್ಯಾಬ್, 18 ಜೀಪ್ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಈ ಚುನಾವಣೆಯಲ್ಲಿ ಪ್ರಾಶಸ್ತ್ಯದ ಕ್ರಮವಾಗಿ ಮತ ಚಲಾಯಿಸಬೇಕು. ಅಭ್ಯರ್ಥಿ ಹೆಸರಿನ ಮುಂದೆ 1 ಎಂದು ಗುರುತು ಹಾಕಬೇಕು. ನಂತರ 2,3,4 ಎಂದು ನಮೂದಿಸಬೇಕು ಈ ಸಂಬಂಧ ಈಗಾಗಲೇ ಮತದಾರರಿಗೆ ಅರಿವು ಮೂಡಿಸಲಾಗಿದೆ. ಗೌಪ್ಯ ಮತದಾನ ನಡೆಯುವುದರಿಂದ ಎಲ್ಲರೂ ನಿರ್ಭಯವಾಗಿ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES