Monday, December 23, 2024

ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಕಿಡಿ

ರಾಜ್ಯ : ನಿಮ್ಮನ್ನು ಕರೆದವರು ಯಾರು, ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು ಎಂದು ಪ್ರಶ್ನಿಸುವ ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನಾವೇನು ಎಲೆ, ಅಡಿಕೆ ಕೊಟ್ಟು ಆಹ್ವಾನಿಸಿದ್ವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರ್‍ಯಾರು? ಎಂದು ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ದಾಳಿ ನಡೆಸಿದ್ದು, ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ.

 ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಹೇಳಿ ನಮ್ಮ ಮನೆ ಬಾಗಿಲಿಗೆ ಬಂದ ಕಾಂಗ್ರೆಸ್ ನಾಯಕರು ಸರ್ಕಾರದ ನೇತೃತ್ವ ವಹಿಸಿ ಎಂದರು. ಹಾಗಾದರೆ, ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ ಸಿದ್ದಸೂತ್ರಧಾರ? ಎಂದು ಪ್ರಶ್ನಿಸಿದ್ದಾರೆ.

RELATED ARTICLES

Related Articles

TRENDING ARTICLES