Sunday, December 22, 2024

BJP ವಿರುದ್ಧ ಪ್ರಿಯಾಂಕ ವಾಗ್ದಾಳಿ

ಹಣದುಬ್ಬರದ ವಿರುದ್ಧ ಕಾಂಗ್ರೆಸ್ ಪಕ್ಷವು ಜೈಪುರದಲ್ಲಿ ಹಮ್ಮಿಕೊಂಡಿರುವ ಮೆಹಂಗೈ ಹಠಾವೋ ರ‍್ಯಾಲಿಯಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ 70 ವರ್ಷದಲ್ಲಿ ಏನು ಅಭಿವೃದ್ಧಿ ಮಾಡಿದೆ ಎಂದು ಬಿಜೆಪಿಗರು ಪ್ರಶ್ನಿಸುತ್ತಾರೆ. ವಿಚಿತ್ರ ಎಂದರೆ ಆ 70 ವರ್ಷಗಳಲ್ಲಿ ಕಾಂಗ್ರೆಸ್ ನಿರ್ಮಿಸಿದ ಎಲ್ಲವನ್ನೂ ಇದೀಗ ಬಿಜೆಪಿಯ 7 ವರ್ಷದ ಆಡಳಿತದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆಡಳಿತ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ.

7 ವರ್ಷಗಳ ಬಿಜೆಪಿ ಆಡಳಿತದಲ್ಲಿ ಆರೋಗ್ಯ ಸೇವೆಗಾಗಿ ಒಂದೇ ಒಂದು ಏಮ್ಸ್ ಸಂಸ್ಥೆಯನ್ನು ನಿರ್ಮಾಣ ಮಾಡಲಾಗಿದೆಯೇ?, ನೀವು ಬಳಸುತ್ತಿರುವ ಪ್ರತಿ ವಿಮಾನ ನಿಲ್ದಾಣಗಳು ಕಾಂಗ್ರೆಸ್ ಅವಧಿಯಲ್ಲಿ ನಿರ್ಮಾಣವಾಗಿವೆ ಎಂದು ಪ್ರಿಯಾಂಕಾ ಗಾಂಧಿ ಬಿಜೆಪಿ ಪಕ್ಷವನ್ನು ಪ್ರಶ್ನಿಸಿದ್ದಾರೆ.

RELATED ARTICLES

Related Articles

TRENDING ARTICLES