ಕಾಂಗ್ರೆಸ್, ಎನ್ಸಿಪಿ ಮತ್ತು ಶಿವಸೇನೆ ಪಕ್ಷಗಳು ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡುತ್ತವೆ ಅಂತಾರೆ ಕೇಂದ್ರದಲ್ಲೂ ಯಾಕೆ ಮಾಡಬಾರದು ಎಂದು ಮಹಾರಾಷ್ಟ್ರ ಸಚಿವ, ಎನ್ಸಿಪಿ ನಾಯಕ ನವಾಬ್ ಮಲ್ಲಿಕ್ ಪ್ರಶ್ನಿಸಿದ್ದಾರೆ.
ಶರದ್ ಪವಾರ್ 81ನೇ ಜನ್ಮನದಿನದ ಸಮಾರಂಭದಲ್ಲಿ ಮಾತನಾಡಿದ ಅವರು, 2024ರ ಲೋಕಸಭಾ ಚುನಾವಣೆಯಲ್ಲಿ ಕೂಡ ಈ ಪಕ್ಷಗಳು ಒಟ್ಟಾಗಬೇಕು. ಕೇಂದ್ರದಲ್ಲಿ ಶರದ್ ಪವಾರ್ ನೇತೃತ್ವದ ಸರ್ಕಾರ ರಚನೆ ಮಾಡಬೇಕು.
ಕಳೆದ ಏಳು ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು, ನರೇಂದ್ರ ಮೋದಿಯವರೇ ಪ್ರಧಾನಿಯಾಗಿದ್ದಾರೆ. ಆದರೆ ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪ್ರಧಾನಿ ಅಭ್ಯರ್ಥಿ ಯಾರು? ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ಅಲ್ಲಿ ಯಾರಿದ್ದಾರೆ? ಎಂದು ಪ್ರಶ್ನಿಸಿದರು.