Friday, January 24, 2025

ಅಗ್ನಿ-ಪಿ ಕ್ಷಿಪಣಿ ಯಶಸ್ವಿ ಪರೀಕ್ಷೆ

ಬಾಲಾಸೋರ್: ಒಡಿಶಾದ ಬಾಲಾಸೋರ್‌ನ ಕರಾವಳಿಯಲ್ಲಿ ಭಾರತ ಅಗ್ನಿ ಪ್ರೈಮ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಅಗ್ನಿ-ಪಿ, ಅಗ್ನಿ ವರ್ಗದ ಕ್ಷಿಪಣಿಗಳ ಹೊಸ ಪೀಳಿಗೆಯ ಸುಧಾರಿತ ರೂಪಾಂತರವಾಗಿದೆ. ಇದು 1,000 ಮತ್ತು 2,000 ಕಿಮೀ ವ್ಯಾಪ್ತಿಯ ಸಾಮರ್ಥ್ಯವನ್ನು ಹೊಂದಿರುವ ಕ್ಯಾನಿಸ್ಟರೈಸ್ಡ್ ಕ್ಷಿಪಣಿಯಾಗಿದೆ.

ಇದು ಅಗ್ನಿ ಪ್ರೈಮ್ ಕ್ಷಿಪಣಿಯ ಎರಡನೇ ಪರೀಕ್ಷೆಯಾಗಿದೆ. ಬಾಲಸೋರ್‌ನ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ ಪರೀಕ್ಷೆಯನ್ನು ನಡೆಸಲಾಗಿದೆ. ಈ ಪರೀಕ್ಷೆಯಲ್ಲಿ ಪರಮಾಣು ಸಾಮರ್ಥ್ಯದ ಕಾರ್ಯತಂತ್ರದ ಕ್ಷಿಪಣಿ ಅಗ್ನಿ ಪ್ರೈಮ್‌ಗೆ ಸಾಕಷ್ಟು ಹೊಸ ವೈಶಿಷ್ಟ್ಯಗಳನ್ನು ಸೇರಿಸಲಾಗಿದೆ. ಈ ಕ್ಷಿಪಣಿಯು  ಶತ್ರು ರಾಷ್ಟ್ರದ ಯಾವುದೇ ಸ್ಥಳಕ್ಕೆ ಬೇಕಾದರೂ ತಲುಪುವ ಸಾಮರ್ಥ್ಯ ಹೊಂದಿದೆ.

RELATED ARTICLES

Related Articles

TRENDING ARTICLES