Thursday, December 26, 2024

ಕರಾಚಿಯಲ್ಲಿ ಬಾಂಬ್​​ ಸ್ಫೋಟ​

ಕರಾಚಿ: ಭಯೋತ್ಪಾದನೆಗೆ ಹೆಸರಾದ ಪಾಕಿಸ್ತಾನದಲ್ಲೂ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಮಾಡಿದ್ದುಣ್ಣೊ ಮಹರಾಯ ಅನ್ನುವ ಗಾದೆ ಇದಕ್ಕೆ ಇರಬೇಕು. ಪಾಕಿಸ್ತಾನದ ಕರಾಚಿಯಲ್ಲಿ ಉಂಟಾದ ಭಾರಿ ಬಂಬ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಈ ಘಟನೆಯಲ್ಲಿ ಸುಮಾರು 20 ಜನರು ಗಾಯಗೊಂಡಿದ್ದಾರೆ.

ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆ ಮಾರುಕಟ್ಟೆಯಲ್ಲಿದ್ದ ಮಕ್ಕಳು ಸೇರಿದಂತೆ ಸಾಕಷ್ಟು ಜನರ ಮೈಗೆ ಬೆಂಕಿ ಹೊತ್ತಿಕೊಂಡು ಕಣ್ಮುಂದೆಯೇ ಸುಟ್ಟು ಕರಕಲಾದರು. ಬಾಂಬ್ ಸ್ಫೋಟದ ನಂತರ ಕುಸಿದ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಕರಾಚಿಯ ಶೇರ್ಷಾ ಪ್ರದೇಶದಲ್ಲಿ ಶನಿವಾರ ಸ್ಫೋಟ ಸಂಭವಿಸಿತ್ತು. ಈ ಸ್ಫೋಟದಲ್ಲಿ ಬ್ಯಾಂಕ್‌ನ ಕಟ್ಟಡವೊಂದು ಭಾಗಶಃ ಕುಸಿದು ಬಿದ್ದಿರುವ ವಿಡಿಯೋಗಳು ವೈರಲ್ ಆಗಿವೆ.

RELATED ARTICLES

Related Articles

TRENDING ARTICLES