Monday, December 23, 2024

ಮಹಾರಾಷ್ಟ್ರ ಸಚಿವರಿಂದ ಉರಿಯುವ ಬೆಂಕಿಗೆ ತುಪ್ಪ

ಬೆಳಗಾವಿ : ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರತಿಮೆಗಳ ಅವಮಾನ ಕುರಿತಂತೆ ನಡೆಯುತ್ತಿರುವ ಘಟನೆಗಳ ಕುರಿತು ಶಾಂತಿ ಕಾಪಾಡುವಂತೆ ಮನವಿ ಮಾಡುವ ಬದಲು ಮಹಾರಾಷ್ಟ್ರ ರಾಜಕಾರಣಿಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿದ್ದಾರೆ ಎಂಬುದು ಅವರ ಪ್ರಚೋದನೆ ಮಾತುಗಳಿಂದ ಗೊತ್ತಾಗುತ್ತಿದೆ.

ಬೆಂಗಳೂರಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ಮಹಾರಾಷ್ಟ್ರ ಸಚಿವ ಏಕನಾಥ ಶಿಂಧೆ ಒತ್ತಾಯ ಮಾಡಿದ್ದಾರೆ. ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ್ದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿರುವ ಶಿಂಧೆ, ಕ್ರಮ ಕೈಗೊಳ್ಳದಿದ್ದರೆ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಕರ್ನಾಟಕ ಸರ್ಕಾರವೇ ಹೊಣೆ ಎಂದ ಹೇಳಿದ್ದಾರೆ.

ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರ ಘಟನೆ ಕುರಿತ ಹೇಳಿಕೆಗೆ ಮಹಾರಾಷ್ಟ್ರ ಸಚಿವರು ಕ್ಯಾತೆ ತೆಗೆದಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಹೇಳಿಕೆಯನ್ನು ಖಂಡಿಸಿರುವ ಮಹಾರಾಷ್ಟ್ರ ಆರೋಗ್ಯ ಸಚಿವ ಏಕನಾಥ ಶಿಂಧೆ ‘ಶಿವಸೇನಿಕರು ಸಮಾಜದ್ರೋಹಿಗಳಿಗೆ ತಕ್ಕ ಪಾಠ ಕಲಿಸಲು ಸಿದ್ದರಿದ್ದಾರೆ’ ಎಂದು ಹೇಳುವುದರ ಜೊತೆಗೆ ಕಾನೂನು ಕೈಗೆತ್ತಿಕೊಂಡು ಅಹಿತಕರ ಘಟನೆ ನಡೆದರೆ ಕರ್ನಾಟಕ ಸರ್ಕಾರವೇ ಹೊಣೆ ಎಂದು ಹೇಳುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.

RELATED ARTICLES

Related Articles

TRENDING ARTICLES