Thursday, January 23, 2025

ಕುಸ್ತಿಪಟುವಿಗೆ ಕಪಾಳಮೋಕ್ಷ

ರಾಂಚಿ: ಜಾರ್ಖಂಡ್​​​ನ ರಾಂಚಿಯಲ್ಲಿ ಕ್ರೀಡಾಕೂಟ ಸಮಾರಂಭದ ವೇದಿಕೆಯೊಂದರಲ್ಲಿ ಬಿಜೆಪಿ ಸಂಸದರೊಬ್ಬರು ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡಿದ್ದಾರೆ. ರಾಂಚಿಯ ಶಹೀದ್ ಗಣಪತ್ ರಾಯ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 15 ವರ್ಷದೊಳಗಿನವರ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನ ಪಂದ್ಯದ ವೇಳೆ ಈ ಘಟನೆ ನಡೆದಿದೆ.

ಕುಸ್ತಿಪಟು ಉತ್ತರ ಪ್ರದೇಶ ಮೂಲದವರಾಗಿದ್ದು, ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಲು ವಯೋಮಿತಿ ಮೀರಿತ್ತು. ಇದರಿಂದಾಗಿ ಅವರಿಗೆ ಅವಕಾಶ ನೀಡಲಿಲ್ಲ. ಆದರೆ ಭಾಗವಹಿಸಲು ಅವಕಾಶ ನೀಡುವಂತೆ ಸಂಸದರ ಮನವೊಲಿಕೆಗೆ ಕುಸ್ತಿಪಟು ಮುಂದಾದರು. ಆಗ ತಾಳ್ಮೆ ಕಳೆದುಕೊಂಡ ಸಂಸದರು ಎರಡೆರಡು ಬಾರಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.

RELATED ARTICLES

Related Articles

TRENDING ARTICLES