ಉತ್ತರ ಪ್ರದೇಶ: ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯ ಚುನಾವಣೆಗೆ ಕಸರತ್ತು ಜೋರಾಗಿದೆ.. ಪ್ರಧಾನಿ ನರೇಂದ್ರ ಮೋದಿ, ಪದೇ ಪದೆ ಉತ್ತರ ಪ್ರದೇಶಕ್ಕೆ ಎಂಟ್ರಿ ಕೊಡ್ತಿದ್ದಾರೆ. ಉತ್ತರ ಗೆಲ್ಲಲು ಹಲವು ಯೋಜನೆ ಘೋಷಣೆ ಮಾಡ್ತಿದ್ದಾರೆ. ಇದೀಗ ಮಹಿಳಾ ಮತದಾರರಿಗೆ ಗಾಳ ಹಾಕಿದ್ದಾರೆ. ಈ ಮಧ್ಯೆ, ಬಿಜೆಪಿ ವಿರುದ್ಧ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಕಿಡಿಕಾರಿದ್ದಾರೆ..
ಪಂಚ ರಾಜ್ಯ ಚುನಾವಣೆಗೆ ಮೋದಿ ತಂತ್ರಗಾರಿಕೆ; ಕಮಲ ಪಡೆಯಿಂದ ಮಹಿಳಾ ಮತದಾರರ ಓಲೈಕೆ
ಕೇಂದ್ರ ಸರ್ಕಾರಕ್ಕೆ ಪ್ರತಿಷ್ಠೆಯ ಕಣವಾಗಿರುವ ಪಂಚರಾಜ್ಯ ಚುನಾವಣೆಯನ್ನು ನರೇಂದ್ರ ಮೋದಿ ಆ್ಯಂಡ್ ಟೀಮ್ ಮುಖ್ಯವಾಗಿ ಪರಿಗಣಿಸಿದೆ.. ಅದ್ರಲ್ಲೂ ಉತ್ತರ ಪ್ರದೇಶ ಮತ್ತೆ ತೆಕ್ಕೆಗೆ ಪಡೆಯಲು ಕಸರ್ತು ಮಾಡಲಾಗ್ತಿದೆ.. ಕಾಂಗ್ರೆಸ್, ಎಸ್‌ಪಿ ಮುಖಂಡರು ಮೋದಿ ವಿರುದ್ಧ ರಣತಂತ್ರ ರೂಪಿಸುತ್ತಿದ್ದು, ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ..
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನಲೆ ಪದೇ ಪದೇ ವಿವಿಧ ಕಾರ್ಯಕ್ರಮಗಳ ನೆಪದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇನ್ನು ಪ್ರಯಾಗ್ ರಾಜ್ಗೆ ಭೇಟಿ ನೀಡಿದ್ದ ಪ್ರಧಾನಿ, ಮುಂಬರುವ ಚುನಾವಣೆಗೆ ಮಹಿಳಾ ಮತದಾರರ ಓಲೈಕೆಗೆ ಪ್ರಯತ್ನ ನಡೆಸಿದರು. ಇದೇ ವೇಳೆ ತಮ್ಮ ಸರ್ಕಾರ ಮಹಿಳಾ ಕಲ್ಯಾಣಕ್ಕಾಗಿ ನೀಡಿದ ಕೊಡುಗೆಗಳ ಕುರಿತು ತಿಳಿಸುವ ಮೂಲಕ ವಿರೋಧ ಪಕ್ಷಗಳಿಗೆ ಚಾಟಿ ಬೀಸಿದರು. ಕಳೆದ ಐದು ವರ್ಷಗಳ ಹಿಂದೆ ಉತ್ತರ ಪ್ರದೇಶದಲ್ಲಿ ಮಾಫಿಯಾ ರಾಜ್ ಮತ್ತು ಗೂಂಡಾರಾಜ್ ಇತ್ತು. ಇದರಿಂದ ಹೆಚ್ಚು ಸಂಕಷ್ಟಕ್ಕೆ ಒಳಗಾದವರು ಮಹಿಳೆಯರು. ಆದರೆ ಯೋಗಿ ಸರ್ಕಾರ ಅಪರಾಧಿಗಳನ್ನು ಅವರ ಸ್ಥಾನದಲ್ಲಿ ಇರಿಸಿ. ಮಹಿಳೆಯರಿಗೆ ಧೈರ್ಯ ತುಂಬಿದ್ದಾರೆ ಎಂದರು. ಸ್ವಸಹಾಯ ಗುಂಪುಗಳ ಬ್ಯಾಂಕ್ ಖಾತೆಗೆ 1,000 ಕೋಟಿ ರೂ.ಗಳನ್ನು ವರ್ಗಾಯಿಸಲಾಗಿದೆ.. ಇದರಿಂದ ಸುಮಾರು 16 ಲಕ್ಷ ಮಹಿಳಾ ಸದಸ್ಯರಿಗೆ ಪ್ರಯೋಜನವಾಗಿದೆ. ಈ ವರ್ಗಾವಣೆಯನ್ನು ದೀನದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಮಾಡಲಾಗುತ್ತಿದೆ, 80,000 ಸ್ವಸಹಾಯ ಗುಂಪುಗಳು ಸಮುದಾಯ ಹೂಡಿಕೆ ಮಾಡಲಾಗಿದೆ. ಪ್ರತಿ ಸ್ವ ಸಹಾಯ ಗುಂಪಿಗೆ ತಾ 1.10 ಲಕ್ಷ ರೂ. ಮತ್ತು 60,000 ಸ್ವ ಸಹಾಯ ಗುಂಪು ಇದರ ಲಾಭ ಪಡೆಯಲಿದೆ.
ಒಂದಲ್ಲ ಒಂದು ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಂಜಾಬ್‌ನಲ್ಲಿಎರಡು ಗುಂಪು ಹತ್ಯೆಗಳು ನಡೆದ ಬೆನ್ನಲ್ಲೇ ರಾಹುಲ್ ಗಾಂಧಿ ಈ ಟ್ವೀಟ್ ಮಾಡಿದ್ದಾರೆ. ಬಿಜೆಪಿ 2014ರಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ ಅದು ಅಧಿಕಾರಕ್ಕೆ ಬರುವುದಕ್ಕೂ ಮೊದಲು ದೇಶದಲ್ಲಿ ಗುಂಪು ಹತ್ಯೆ ಎಂಬುದನ್ನು ಪ್ರಾಯೋಗಿಕವಾಗಿ ನೋಡಲು ಸಾಧ್ಯವೇ ಇರಲಿಲ್ಲ ಎಂದಿದ್ದಾರೆ. ಅಂದರೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರ ಹಿಡಿದ ನಂತರವೇ ಗುಂಪು ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಅದಕ್ಕೂ ಮೊದಲು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಗುಂಪು ಹತ್ಯೆಗಳು ನಡೆಯುತ್ತಿರಲಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಕ್ಕಳ ಇಬ್ಬರ ಇನ್‌ಸ್ಟ್ರಾಗ್ರಾಂ ಖಾತೆ ಹ್ಯಾಕ್ ಆಗಿದೆ ಎಂದು ಆರೋಪ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿನ ತಮ್ಮ ಮಕ್ಕಳ ಖಾತೆ ಮೇಲೂ ಸರ್ಕಾರ ದಾಳಿ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.