Wednesday, April 24, 2024

ಸ್ಥಿರತೆ ಕಾಯ್ದುಕೊಂಡ ಇಂಧನ ದರ

ದೇಶದಲ್ಲಿ ಇಂದೂ ಕೂಡ ಪೆಟ್ರೋಲ್​-ಡೀಸೆಲ್​ ಬೆಲೆ ಸ್ಥಿರವಾಗಿದ್ದು, ಯಾವುದೇ ಪ್ರಮುಖ ನಗರಗಳಲ್ಲೂ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಆದರೆ ಅಂತರಾಷ್ಟೀಯ ಮಾರುಕಟ್ಟೆಯಲ್ಲಿ ಇಂದು ಕಚ್ಚಾ ತೈಲದ ಬೆಲೆ ಏರಿಕೆಯ ಹಾದಿ ಹಿಡಿದಿದೆ.

ಕಳೆದ ನವೆಂಬರ್​ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್​​ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡಿದೆ. ಅಂದಿನಿಂದಲೂ ಭಾರತದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಕೆಲವೇ ದಿನಗಳ ಹಿಂದೆ ದೆಹಲಿಯ ಆಪ್​ ಸರ್ಕಾರ ಪೆಟ್ರೋಲ್​ ಮೇಲಿನ ವ್ಯಾಟ್​ನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ.

ಹಾಗಾಗಿ ಅಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂ.ಕಡಿಮೆಯಾಗಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

RELATED ARTICLES

Related Articles

TRENDING ARTICLES