Saturday, January 11, 2025

ಪತ್ಯೇಕ ರಾಜ್ಯ ಅನಿವಾರ್ಯ-ಖಂಡ್ರೆ

ಬೆಳಗಾವಿ: ಉತ್ತರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಹಾಗೂ ಅದರಿಂದಾಗಿ ಆ ಭಾಗದಲ್ಲಿ ಪ್ರತ್ಯೇಕ ರಾಜ್ಯದ ಕೂಗು ಕರ್ನಾಟಕಕ್ಕೆ ಹೊಸದೇನಲ್ಲ. ಇದೀಗ ಖಂಡ್ರೆ ಸದನದಲ್ಲೇ ಆ ಬಗ್ಗೆ ಕಿಡಿ ಕಾರಿದ್ದಾರೆ. ರಾಜ್ಯದ ಅಭಿವೃದ್ಧಿ ಚರ್ಚೆ ಬಿಟ್ಟು ಜನ ವಿರೋಧಿ ಮತಾಂತರ ಕಾಯ್ದೆ ಜಾರಿ ತರಲು ಹೊರಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ಬಗ್ಗೆ ಪ್ರಶ್ನೆ ಕೇಳಿದರೆ ಚಕಾರ ಎತ್ತಲ್ಲ. ಬದಲಾಗಿ ಮತಾಂತರ ನಿಷೇಧದಂತಹ ಉಪಯೋಗವಿಲ್ಲದ ಕಾನೂನನ್ನುಜಾರಿಗೊಳಿಸಲು ಸಮಯ ವ್ಯಯಿಸುತ್ತಾರೆ. ಇದೇ ರೀತಿ ಪರಿಸ್ಥಿತಿ ಮುಂದುವರಿದರೆ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯ ಎಂದು ಸಿಡಿದರು.

ಕಲ್ಯಾಣ ಕರ್ನಾಟಕದ ವಿಷಯವಾಗಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಕಾನೂನಾತ್ಮಕವಾಗಿ ಅಭಿವೃದ್ಧಿ ಮಂಡಳಿ ರಚನೆ ಆಗಿಲ್ಲ. ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕವನ್ನ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಅಭಿವೃದ್ಧಿ ಚರ್ಚೆ ಬಿಟ್ಟು ಜನ ವಿರೋಧಿ ಕಾಯ್ದೆ ಜಾರಿ ತರಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

RELATED ARTICLES

Related Articles

TRENDING ARTICLES