Wednesday, January 22, 2025

ಅಕ್ರಮ ಚಿನ್ನ ಸಾಗಣೆ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ ಮಾಡಿರುವ ಘಟನೆ ನಡೆದಿದೆ. ಬಂಧಿತನು ಉತ್ತರ ಪ್ರದೇಶದ 33 ವರ್ಷದ ವ್ಯಕ್ತಿ ಯೆಂಬುದನ್ನು ಪೊಲೀಸರು ಖಚಿತಪಡಿಸಿದ್ದಾರೆ. ಬಂಧಿತ ವ್ಯಕ್ತಿಯಿಂದ 930 ಗ್ರಾಂ ನ 45 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ಶಾರ್ಜಾದಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಎಂದು ಹೇಳಲಾಗಿದೆ. ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಈ  ಅಕ್ರಮ ಬಯಲಿಗೆ ಬಂದಿದೆ. ರಾಡ್ ಆಕಾರದಲ್ಲಿ ಚಿನ್ನ ಸಾಗಿಸುತ್ತಿದ್ದ ಆರೋಪಿ, ಜ್ಯೂಸ್ ಯಂತ್ರದ ಒಳಗೆ ಚಿನ್ನದ ರಾಡ್ ಅಡಗಿಸಿಟ್ಟಿದ್ದ ಎಂದು ತಿಳಿದುಬಂದಿದೆ.

RELATED ARTICLES

Related Articles

TRENDING ARTICLES