Sunday, December 22, 2024

ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಪಾದಯಾತ್ರೆ

ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್​ ಮುಂದಾಳತ್ವದಲ್ಲಿ 2022ರ ಜನವರಿ 9ರಂದು ಬೆಳಗ್ಗೆ 9.30ಕ್ಕೆ ಪಾದಯಾತ್ರೆ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಮೇಕೆದಾಟು ಪ್ರದೇಶದಿಂದ ಫ್ರೀಡಂಪಾರ್ಕ್​ವರೆಗೆ ಪಾದಯಾತ್ರೆ ನಡೆಯಲಿದೆ. ಗ್ರಾಮೀಣ ಪ್ರದೇಶ, ನಗರ ಪ್ರದೇಶದಲ್ಲಿ ತಲಾ 5 ದಿನದಂತೆ ಪಾದಯಾತ್ರೆ ನಡೆಯಲಿದ್ದು ರಾಜ್ಯದ ಹಿತದೃಷ್ಟಿಯಿಂದ ನಡೆಯುತ್ತಿರುವ ಪಕ್ಷಾತೀತ ಹೋರಾಟಕ್ಕೆ ಎಲ್ಲ ವರ್ಗ, ಸಮುದಾಯದವರು ಬೆಂಬಲ ನೀಡಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಹೋರಾಟದಲ್ಲಿ ಭಾಗವಹಿಸುವವರಿಗೆ ಉಚಿತ ಊಟ, ವಸತಿ ವ್ಯವಸ್ಥೆ ಇರಲಿದೆ. ಜೊತೆಗೆ www.MekedatuNammaHakku.org ಈ ಲಿಂಕನ್ನು ಓಪನ್ ಮಾಡಿ ನೊಂದಾಯಿಸಿಕೊಂಡು ಹೋರಾಟದಲ್ಲಿ ಕೈ ಜೋಡಿಸಿ ಎಂದು ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES