Friday, April 26, 2024

ವಿಜಯಪುರಕ್ಕೆ ಇಂದು ಸಿಎಂ ಭೇಟಿ :ವಿವಿಧ ಕಾಮಗಾರಿಗಳಿಗೆ ಚಾಲನೆ

ವಿಜಯಪುರ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳಿಗೆ ವಿಜಯಪುರ ನಗರಕ್ಕೆ ಸಿಎಂ ಆಗಮಿಸುತ್ತಿದ್ದಾರೆ.

ಬಸವರಾಜ ಬೊಮ್ಮಾಯಿ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿ ಇಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಅಂಗವಾಗಿ ನಗರದ ಕಿರಣ ಬಜಾರ್ ಬಳಿಯಿರುವ ವಾಜಪೇಯಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ನಂತರ ಡಿಸಿ ಕಚೇರಿ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ ಮಾಡಿ, ಬಳಿಕ ವಿದ್ಯುತ್ ದೀಪಗಳು, ಆಕ್ಸಿಜನ್ ಪ್ಲಾಂಟ್ ಉದ್ಘಾಟನಾ, ಜಿಲ್ಲೆಯ ವಿವಿಧ ತಾಲೂಕುಗಳನ್ನು ಅಭಿವೃದ್ಧಿ ಮಾಡಲು 240 ಕೋಟಿ ರೂಪಾಯಿಯ ವಿವಿಧ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಿದ್ದಾರೆ.

ವಿಜಯಪುರ ನಗರ, ಬಬಲೇಶ್ವ, ಸಿಂದಗಿ, ನಾಗಠಾಣ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ವಿಜಯಪುರ ಜಿಲ್ಲಾ ಕಚೇರಿಗಳ ಸಂಕೀರ್ಣ ಕಾಮಗಾರಿಗೆ ಶಂಕು ಸ್ಥಾಪನೆಯನ್ನು  ನೆರವೇರಿಸಲಿರುವ ಸಿಎಂ.

ಅಲ್ಲದೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಡವರಿಗೆ ಆರು ಸಾವಿರ ಮನೆಗಳನ್ನು ಕೊಡುವ ಕೆಲಸ ಆಗಲಿದೆ. ಹಾಗೂ ಕೊವಿಡ್​ನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ನೀಡಲಿದ್ದೇವೆಂದು ಹೇಳಿದರು.
ಮತ್ತು ರಾಜ್ಯದಲ್ಲಿ ಒಮಿಕ್ರಾನ್ ವೈರಸ್​ ಹೆಚ್ಚಾಗುತ್ತಿರುವ ಹಿನ್ನಲೆ ಮತ್ತು ನ್ಯೂ ಇಯರ್ ವಿಚಾರವಾಗಿ ನಾಳೆ ಸಭೆ ಕರೆಯಲಾಗುವುದು, ಸಭೆಯಲ್ಲಿ ಮಹಾರಾಷ್ಟ್ರ, ಕೇರಳದಿಂದ ವೈರಸ್​ ಹರಡುವ ಸಾಧ್ಯತೆ ಇರುವುದರಿಂದ ಬಾರ್ಡರ್​ಗಳಲ್ಲಿ ಕಟ್ಟೆಚ್ಚರ ವಹಿಸಲಾಗುವುದು. ನೈಟ್ ಕರ್ಫ್ಯು ಬಗ್ಗೆಯೂ ನಾಳೆ ಚರ್ಚೆ ಮಾಡಿ,ಅಂತಿಮ ಮಾರ್ಗಸೂಚಿಯನ್ನು ಹೊರಡಿಸಲಿದ್ದೇವೆ ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದ್ದಾರೆ.

ಮಧ್ಯಾಹ್ನ 2.00 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿಗೆ ತೆರಳಲಿರುವ ಸಿಎಂ.
ಗೋವಿಂದ್ ಕಾರಜೋಳ, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ, ಸಿಸಿ ಪಾಟೀಲ್ ಸೇರಿದಂತೆ ಹಲವು ಸಚಿವರು, ಶಾಸಕರು ಸಮಾರಂಭದಲ್ಲಿ ಪಾಲ್ಗೊಳಿದ್ದಾರೆ.

RELATED ARTICLES

Related Articles

TRENDING ARTICLES