Sunday, December 22, 2024

ಊಹಾಪೋಹಗಳಿಗೆ ಕಿವಿಗೊಡಬಾರದು : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಮುಖ್ಯಮಂತ್ರಿ ಬದಲಾವಣೆ ಇಲ್ಲ, ಊಹಾಪೋಹಗಳಿಗೆ ಕಿವಿಗೊಡಬಾರದು. ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳು ಹರಡುವುದು ತಪ್ಪು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ಸಿಎಂ ಅವರು ಅಮೇರಿಕಾ ಹೋಗ್ತಾರೆ, ಅವರನ್ನು ತೇಗಿತಾರೆ ಇದೆಲ್ಲ ಸುಳ್ಳು. ಸಿಎಂ ಬದಲಾವಣೆ ಬಗ್ಗೆ ವರಿಷ್ಠರು ಮಟ್ಟದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ. ಆ ರೀತಿಯ ಬೆಳವಣಿಗೆ ಇದ್ದಿದ್ದರೆ ನನಗೆ ಮಾಹಿತಿ ಬರುತ್ತಿತ್ತು. ಸುಮ್ಮನೆ ಊಹಾಪೋಹಗಳನ್ನ ಹರಡಬಾರದು ಎಂದು ನಾನು ಮನವಿ ಮಾಡುತ್ತೇನೆ. ಯಾರು ಈ ರೀತಿ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ, ಇದನ್ನು ಕೈಬಿಡಬೇಕು ಎಂದರು.

ದಿ. ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಸ್ವಚ್ಚತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.ರುದ್ರಭೂಮಿ ಸ್ವಚ್ಚತೆ ಕೈಗೆತ್ತಿಕೊಳ್ಳಲಾಗಿದೆ.ಶಾಶ್ವತವಾಗಿ ಸ್ವಚ್ಚಗೊಳಿಸಿ, ಸುಣ್ಣ-ಬಣ್ಣ ಬಳಿದು- ವಿದ್ಯುತ್ ದೀಪಗಳನ್ನು ಅಳವಡಿಸುವ ಕಾರ್ಯ ಮಾಡುತ್ತಿದ್ದೇವೆ. ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ಸೇವೆಯಲ್ಲಿ ತೊಡಗಿಸುಕೊಳ್ಳಬೇಕು ಎಂಬುದು ಪ್ರಧಾನಿಗಳ ಆಶಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಸೆಯಂತೆ ಸ್ವಚ್ಚತಾ ಕಾರ್ಯ ನಡೆಯುತ್ತಿದೆ ಎಂದರು.

RELATED ARTICLES

Related Articles

TRENDING ARTICLES