Wednesday, January 22, 2025

ಕ್ರಿಸ್ಮಸ್​​​​​ ಶುಭಾಶಯ ಕೋರಿದ ಪ್ರಧಾನಮಂತ್ರಿ ಮೋದಿ ಹಾಗೂ ರಾಷ್ಟ್ರಪತಿ ಕೋವಿಂದ್

ವಿಶ್ವದಾದ್ಯಂತ ಸಂಭ್ರಮದ ಕ್ರಿಸ್’ಮಸ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

 

ಸಾಮಾಜಿಕ ಜಾಲತಾಣ ಟ್ವಿಟ್ಟರ್​ನಲ್ಲಿ ಟ್ವೀಟ್ ಮಾಡಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು! ಎಲ್ಲರೂ ಆರೋಗ್ಯವಂತರಾಗಿ ಮತ್ತು ಸಮೃದ್ಧಿಯನ್ನು ಹೊಂದಲಿ. ಎಲ್ಲೆಡೆ ಸಾಮರಸ್ಯವಿರಲಿ ಎಂದು ಹೇಳಿದ್ದಾರೆ.

 ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿ, ಈ ಸಂತೋಷದಾಯಕ ಸಂದರ್ಭದಲ್ಲಿ, ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಆಧರಿಸಿದ ಸಮಾಜವನ್ನು ನಿರ್ಮಿಸಲು ಮತ್ತು ನಮ್ಮ ಜೀವನದಲ್ಲಿ ಯೇಸುಕ್ರಿಸ್ತನ ಬೋಧನೆಗಳನ್ನು ಅಳವಡಿಸಿಕೊಳ್ಳಲು ನಾವು ಸಂಕಲ್ಪ ಮಾಡೋಣ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES