Thursday, December 19, 2024

ಕೊರೋನಾ ಲಸಿಕೆ ಇಲ್ಲಿಯವರೆಗೂ ಭಾರತ ಖರ್ಚು ಮಾಡಿರೋದೆಷ್ಟು..?

ರಾಜ್ಯ : ಕೊರೊನಾ ಲಸಿಕೆಗೆ ಖರ್ಚಾದ ಹಣದ ವಿವರವನ್ನು ಕೇಂದ್ರ ಸರ್ಕಾರ ನೀಡಿದೆ. ಸರ್ಕಾರದ ಅಂಕಿ ಅಂಶಗಳ ಪ್ರಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಕೋವಿಡ್-19 ಲಸಿಕೆಗಳನ್ನು ಖರೀದಿಸಲು ಕೇಂದ್ರ ಸರ್ಕಾರ 19,675 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ.

ಕೋವಿಡ್-19 ಲಸಿಕೆಗಾಗಿ ಸರ್ಕಾರವು 2021-2022ರ ಕೇಂದ್ರ ಬಜೆಟ್‌ನಲ್ಲಿ 35,000 ಕೋಟಿ ರೂ.ಗಳನ್ನು ಮೀಸಲಿಟ್ಟಿತ್ತು. “ಡಿಸೆಂಬರ್ 20 ರೊಳಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಕೋವಿಡ್-19 ಲಸಿಕೆಗಳನ್ನು ಖರೀದಿಸಲು 19,675.46 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ” ಎಂದು ಸಾಮಾಜಿಕ ಕಾರ್ಯಕರ್ತ ಅಮಿತ್ ಗುಪ್ತಾ ಅವರು ಸಲ್ಲಿಸಿದ ಆರ್‌ಟಿಐ ಅರ್ಜಿಗೆ ಉತ್ತರ ನೀಡಲಾಗಿದೆ.

 

RELATED ARTICLES

Related Articles

TRENDING ARTICLES