Monday, December 23, 2024

ಸಂವಿಧಾನಕ್ಕೆ ವಿಪತ್ತು : ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ : 2024ರ ಸಂಸತ್‌ ಚುನಾವಣೆಯಲ್ಲಿ ಈ ದೇಶದಲ್ಲಿ ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬಂದಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಸಂವಿಧಾನಕ್ಕೆ ವಿಪತ್ತು ಕಾದಿದೆ ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಆತಂಕ ಹೊರಹಾಕಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರುತ್ತಿರುವ ಬಿಜೆಪಿ ಕೇಂದ್ರದಲ್ಲಿ ಮನ ಬಂದಂತೆ ಅಧಿಕಾರ ಮಾಡುತ್ತಿದೆ. ಇದೇ ಪಕ್ಷ ಮತ್ತೆ ಪುನಃ ಹೆಚ್ಚಿನ ಸ್ಥಾನಗಳೊಂದಿಗೆ 2024ರಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದೇ ಆದರೆ ಸಂವಿಧಾನಕ್ಕೆ ಆಪತ್ತು ನಿಶ್ಚಿತ ಎಂದರು.

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುವ ಎಲ್ಲ ಪ್ರಯತ್ನ ಬಿಜೆಪಿ ಹೊಂದಿದೆ. ಹೀಗಾಗಿ ಸಂವಿಧಾನ ಬದಲಾಯಿಸುವುದನ್ನು ತಪ್ಪಿಸಲು ಜನರು ಈಗಲಾದರೂ ಎಚ್ಚೆತ್ತುಕೊಳ್ಳುವುದು ಅಗತ್ಯವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

RELATED ARTICLES

Related Articles

TRENDING ARTICLES