Wednesday, January 22, 2025

ತೇಜಸ್ವಿ ಸೂರ್ಯ ವಿರುದ್ಧ ನಟಿ ರಮ್ಯ ಟೀಕೆ

ಬೆಂಗಳೂರು: ಉಡುಪಿಯಲ್ಲಿ ಪರ್ಯಾಯ ಅದಮಾರು ಮಠದ ವಿಶ್ವರೂಪಂ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ, ಹಿಂದೂ ಸಂಸ್ಕೃತಿ, ಸಮಾಜ, ಪರಂಪರೆ ಉಳಿಬೇಕಾದರೇ ಹಿಂದೂ ಧರ್ಮ ಉಳಿಯಬೇಕು. ಇದಕ್ಕಾಗಿ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು ಎಂದು ಹೇಳಿದ್ದರು. ಅವರ ಮಾತಿಗೆ ಪರವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ನಂತರ ತೇಜಸ್ವಿ ಸೂರ್ಯ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಂಡು ಕ್ಷಮೆಯಾಚಿಸಿದ್ದರು.

ಇದೀಗ ನಟಿ ರಮ್ಯ ತೇಜಸ್ವಿವರ ಮಾತನ್ನು ಬಲವಾಗಿ ವಿರೋಧಿಸಿದ್ದಾರೆ.  ಸಂಸದ ತೇಜಸ್ವಿ ಸೂರ್ಯನ ಬುರುಡೆಯಲ್ಲಿ ಮೆದುಳೇ ಇಲ್ಲ ಎಂದು ನಟಿ ರಮ್ಯಾ ವಾಗ್ದಾಳಿ ನಡೆಸಿದ್ದಾರೆ. ಇನ್ ಸ್ಟಾ ಸ್ಟೋರಿಯಲ್ಲಿ ತೇಜಸ್ವಿ ಸೂರ್ಯ ಅವರ ವಿವಾದಾತ್ಮಕ ಹೇಳಿಕೆಯ ವೀಡಿಯೋವನ್ನು ಶೇರ್ ಮಾಡಿಕೊಂಡಿರುವ  ರಮ್ಯಾ, ಈ ಮನುಷ್ಯನ ಬುರುಡೆಯಲ್ಲಿ ಮೆದುಳು ಇಲ್ಲ ಎಂದು ಬರೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES