Monday, December 23, 2024

ಸಿಎಂ ಬೊಮ್ಮಾಯಿ ಫುಲ್​​ ಖುಷ್​​

ಹುಬ್ಬಳ್ಳಿ : ಬಿಜೆಪಿ ಪಕ್ಷ ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟು ನಿರ್ಣಯ ಕೈಗೊಂಡ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಿಗೆ ಧನ್ಯವಾದಗಳು ಹಾಗೂ ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮುನ್ನಡೆಯಿರಿ ಎಂದು ಬೆನ್ನುತಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ವರಿಷ್ಠರು, ರಾಜ್ಯದ ನಾಯಕರು ನನ್ನ ಮೇಲೆ ಇರಿಸಿದ ವಿಶ್ವಾಸ ಜವಾಬ್ದಾರಿ ಹೆಚ್ಚಿಸಿದೆ. ತಂಡವಾಗಿ ಪಕ್ಷ ಸಂಘಟನೆ ಹಾಗೂ ಪಕ್ಷ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶಕ್ತಿಮೀರಿ ಶ್ರಮಿಸುತ್ತೇನೆ ಎಂದರು.

ಸಭೆ ಸರಕಾರದ ಆಡಳಿತ ಹಾಗೂ ಅಭಿವೃದ್ಧಿ ಮೆಚ್ಚಿ ಅಭಿನಂದನಾ ನಿರ್ಣಯ ಕೈಗೊಂಡಿರುವುದು ಸಂತಸ ತಂದಿದೆ. ಪಕ್ಷದ ವರಿಷ್ಠರು ನನ್ನ ಮೇಲೆ ಇರಿಸಿದ ವಿಶ್ವಾಸ ವ್ಯಕ್ತಪಡಿಸಿರುವುದಕ್ಕೆ ಧನ್ಯವಾದ ಸಲ್ಲಿಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಪಕ್ಷ ಬಲಿಷ್ಠವಾಗಬೇಕೆಂಬ ಅವರ ನಿರೀಕ್ಷೆಯನ್ನು ಹುಸಿಗೊಳಿಸುವುದಿಲ್ಲ. ಅಲ್ಲದೇ ಮುಂಬರುವ ಚುನಾವಣೆ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋಗಬೇಕೆಂಬ ಅವರ ನಿರೀಕ್ಷೆಯನ್ನು ಸಾಕಾರ ಮಾಡುತ್ತೇವೆ. ಹಾಗೂ ಇದುವರೆಗೂ ಕಾರ್ಯಕಾರಿಣಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲವೆಂದು ತಿಳಿಸಿದರು.
ಅರುಣ್ ಸಿಂಗ್ ಮತ್ತು ಕಟೀಲ್ ನೇತೃತ್ವದಲ್ಲಿ ಕಾರ್ಯಕಾರಿಣಿ ಯಶಸ್ವಿಯಾಗಿ ನಡೆಯುತ್ತಿದೆ, ಹಾಗೂ ವರಿಷ್ಠರಿಗೆ ಇರೋ ಸ್ಪಷ್ಟತೆಯನ್ನು ಅರುಣ್ ಸಿಂಗ್ ಅವರು ಕಾರ್ಯಕಾರಿಣಿಯಲ್ಲಿ ವ್ಯಕ್ತಪಡಿಸಿದ್ದಾರೆ. ಮತ್ತು ಮೊದಲಿನಿಂದಲೂ ನನ್ನ ಮೇಲೆ ವರಿಷ್ಠರಿಗೆ ವಿಶ್ವಾಸವಿದೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂತೋಷವನ್ನು ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES