Monday, December 23, 2024

ಪವಿತ್ರ ಗಂಗೆಯನ್ನು ಮತಕ್ಕೆ ಬಳಸುತ್ತಿದ್ದಾರೆ : ಮಾಜಿ ಸಿಎಂ ಹೆಚ್​​​ಡಿ ಕುಮಾರಸ್ವಾಮಿ

ಕಾಂಗ್ರೆಸ್​​ ಪಾದಯಾತ್ರೆಗೆ ಟೀಕೆ ಮಾಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ನಮ್ಮೊಂದಿಗೆ ಭಾಗವಹಿಸಬಹುದು ಎಂಬ ಡಿಕೆಶಿ ಅವರ ಹೇಳಿಕೆಗೆ ಮಾಜಿ ಸಿಎಂ ಹೆಚ್​​​ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್​​​ನವರು ನನ್ನನ್ನೂ ಸೇರಿಸಿ 83 ತಾಲೂಕುಗಳ ಜನರಿಗೆ ಮೇಕೆದಾಟು ಮಕ್ಮಲ್ ಟೋಪಿ ಹಾಕಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್​ ಮೂಲಕ ಹೇಳಿದ್ದಾರೆ. ಪಾಪ ತೊಳೆಯುವ ತಾಯಿ ಲೋಕಪಾವನಿ ಈಗ ವೋಟಿನ ದಾಳವಾಗುತ್ತಿರುವುದು ನಾಡಿನ ದುರ್ದೈವ ಎಂದು ಡಿಕೆಶಿ ವಿರುದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಜಾಣ ಮರೆವು ಕೂಡ ಒಂದು ರೋಗ. ಮಲತಾಯಿ ಧೋರಣೆಯೇ ಮೈವೇತ್ತ ಕಾಂಗ್ರೆಸ್ ಈಗ ಪವಿತ್ರ ಗಂಗೆಯನ್ನೂ ಮತಕ್ಕೆ ಬಳಸುತ್ತಿದೆ. ಆಗ ಏನೂ ಮಾಡದ ʼಉತ್ತರಕುಮಾರ ಸಿದ್ದಸೂತ್ರಧಾರʼ, ಈಗೇನು ಮಾಡಲು ಸಾಧ್ಯ? ಆದರೆ; ರಾಜ್ಯದ ಹಿತದ ಪ್ರಶ್ನೆ ಬಂದಾಗ ಗೌಡರು ರಾಜಿಯಾದವರಲ್ಲ. ಅವರೊಬ್ಬರಿಂದಲೇ ಮೇಕೆದಾಟು ಯೋಜನೆ ಸಾಕಾರ ಸಾಧ್ಯವೆಂದು ಟ್ವಿಟ್​ ಮೂಲಕ ಉತ್ತರಿಸಿದ್ದಾರೆ.

ನೀರಿನ ಮುಂದೆ ಕಪಟ ನಾಟಕ ಮಾಡುವ ಸಿದ್ದಹಸ್ತ, ಡಿಸೈನ್ ಶೂರರಿಗೆ ಶಾಸ್ತಿ ಮುಂದೆ ಕಾದಿದೆ. ಭೂ ತಾಯಿ ಒಡಲಿನ ಮಣ್ಣು ಬಗೆದ, ಕಲ್ಲುಬಂಡೆಗಳನ್ನು ನುಂಗಿದ ರಕ್ಕಸ ರಾಜಕಾರಣದ ಕಾಕದೃಷ್ಠಿ ಈಗ ಮಲತಾಯಿ ಕಾವೇರಿ ಮೇಲೂ ಬಿದ್ದಿದೆ ಎಂದು ಸರಣಿ ಟ್ವಿಟ್ ಮೂಲಕ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES