Saturday, January 18, 2025

ಮೂರನೇ ದಿನದಾಟದಲ್ಲಿ ಭಾರತ ಮುನ್ನಡೆ

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ತೋರಿದೆ. ಈ ಮೂಲಕ ಮೊದಲ ಇನಿಂಗ್ಸ್‌ ಮುನ್ನಡೆ ಪಡೆದುಕೊಂಡಿದೆ. ಮೊದಲ ಟೆಸ್ಟ್‌ನ ಮೊದಲ ದಿನ ಕೆ.ಎಲ್‌. ರಾಹುಲ್ ಭರ್ಜರಿ ಶತಕ ಸಿಡಿಸಿದರು.

ಮೂರನೇ ದಿನದಾಟದಲ್ಲಿ ವೇಗಿ ಮೊಹಮ್ಮದ್ ಶಮಿ ಆಕರ್ಷಕ ಬೌಲಿಂಗ್ ಮಾಡಿ ಮತ್ತೊಂದು ಸಾಧನೆ ಮಾಡಿದ್ದಾರೆ. ಮೊಹಮ್ಮದ್. ಶಮಿ ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್ ಪಡೆದ ಭಾರತದ ಐದನೇ ವೇಗದ ಬೌಲರ್ ಎನ್ನುವ ದಾಖಲೆ ಮಾಡಿದ್ದಾರೆ. ಫ್ರೀಡಂ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಮೊದಲ ದಿನದಿಂದಲೇ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ದ ಭರ್ಜರಿ ಹಿಡಿತ ಸಾಧಿಸಿ ಹೆಜ್ಜೆಯಿಟ್ಟಿದೆ.

ಇನ್ನು ಮತ್ತೊಂದು ವಿಚಾರ ಏನಂದರೆ ಇದುವರೆಗೂ ಭಾರತ ತಂಡವು ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿಯನ್ನು ಜಯಿಸಿಲ್ಲ. ಹಾಗಾಗಿ ಹೊಸ ಇತಿಹಾಸವನ್ನು ನಿರ್ಮಿಸುವ ಕನಸಿನಲ್ಲಿ ಭಾರತ ತಂಡ ಟೆಸ್ಟ್ ಸರಣಿಯನ್ನು ಆರಂಭಿಸಿದೆ.

ಅರುಣ್​ ಹೂಗಾರ್​ , ಪವರ್​ ಟಿವಿ

RELATED ARTICLES

Related Articles

TRENDING ARTICLES