Monday, December 23, 2024

ನ್ಯೂ ಇಯರ್​ಗೆ ಇಟಲಿ ಪ್ರವಾಸ ಕೈಗೊಂಡ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಾಡಿಕೆಯಂತೆ ಈ ಬಾರಿಯೂ ಇಟಲಿ ಪ್ರವಾಸಕ್ಕೆ ತೆರಳಿದ್ದು, ಈ ಬಗ್ಗೆ ಬಿಜೆಪಿ ಅನಗತ್ಯವಾಗಿ ವದಂತಿ ಹಬ್ಬಿಸುವುದು ಬೇಡ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ರಾಹುಲ್ ಪ್ರವಾಸದ ಬಗ್ಗೆ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಅಲ್ಪಾವಧಿಗೆ ವಿದೇಶ ಪ್ರವಾಸ ಕೈಗೊಂಡಿದ್ದು, ಇಟಲಿಗೆ ತೆರಳಿದ್ದಾರೆ. ಇತ್ತೀಚೆಗೆ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಮಾರು 1 ತಿಂಗಳ ಕಾಲ ವಿದೇಶ ಪ್ರವಾಸ ಕೈಗೊಂಡಿದ್ದರು. ಹೊಸ ವರ್ಷದ ಹೊಸ್ತಿಲಲ್ಲಿ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು, ಕಾಂಗ್ರೆಸ್ ಸಂಸದ ರಾಹುಲ್​ ಗಾಂಧಿ ವೈಯಕ್ತಿಕ ನೆಲೆಗಟ್ಟಿನಲ್ಲಿ ಬುಧವಾರ ಬೆಳಗ್ಗೆ ವಿದೇಶ ಪ್ರವಾಸ ಕೈಗೊಂಡಿರುವುದು ಹಲವರ ಹುಬ್ಬೇರಿಸಿದೆ.

RELATED ARTICLES

Related Articles

TRENDING ARTICLES